ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ್ಯಾದೆಗೇಡು ಹತ್ಯೆ: ಖಂಡನೆ

Last Updated 20 ಜೂನ್ 2021, 6:29 IST
ಅಕ್ಷರ ಗಾತ್ರ

ಕಲಬುರ್ಗಿ: ‘ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣ ತಂದೆಯೇ ಮಗಳನ್ನು ಕೊಲೆ ಮಾಡಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು’ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮುಖಂಡರು ತಿಳಿಸಿದ್ದಾರೆ.

‘ಬಾಳಸಂಗಾತಿಯ ಆಯ್ಕೆ ಯುವಕರ ಹಕ್ಕು. ಅವರ ಹಕ್ಕನ್ನು ಕಸಿಯುವ ಜಾತಿ ವ್ಯವಸ್ಥೆಯಿಂದಾಗಿ ಯುವಕ– ಯುವತಿಯರು ಮಾರ್ಯಾದೆಗೇಡು ಹತ್ಯೆಗೆ ಒಳಗಾಗುತ್ತಿದ್ದಾರೆ. ಇಂಥ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಸರ್ಕಾರ ಏನೂ ಕ್ರಮ ಕೈಗೊಳ್ಳದೇ ಸುಮ್ಮನೇ ಕುಳಿತಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ನೀರಾ ಕಿಡಿ ಕಾರಿದ್ದಾರೆ.

‘ಈ ಹಿಂದೆ ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ಸುಪ್ರೀಂಕೋರ್ಟ್‌ ಗಮನಾರ್ಹ ತೀರ್ಪು ನೀಡಿದೆ. ಯುವಜನರು ಮದುವೆಯಾಗುವ ಹಕ್ಕನ್ನು ಕಸಿದುಕೊಂಡಂತೆ ಎಂದೂ ಎಚ್ಚರಿಸಿತ್ತು ಎಂದು ಇದೇ ವೇಳೆ ಉಲ್ಲೇಖಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT