ಶನಿವಾರ, ಅಕ್ಟೋಬರ್ 16, 2021
22 °C

ಸಿದ್ದರಾಮಯ್ಯ ಯಾವ ಹಿಂದುಳಿದ ಮುಖಂಡರನ್ನು ಬೆಳೆಸಿದ್ದಾರೆ?: ಜೆಡಿಎಸ್ ನಾಯಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕದಲ್ಲಿ ಅಹಿಂದ ವರ್ಗಕ್ಕೆ ಸೇರಿದ ಯಾವ ಮುಖಂಡರನ್ನು ಗುರುತಿಸಿ ಅವರನ್ನು ವಿಧಾನಸಭೆಗೆ ಕಳುಹಿಸುವಲ್ಲಿ ಯಶ ಕಂಡಿದ್ದಾರೆ ಎನ್ನುವುದನ್ನು ಬಹಿರಂಗ ಮಾಡಬೇಕು ಎಂದು ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೀದರ್‌ನಲ್ಲಿ ದಿ. ನಾರಾಯಣರಾವ್ ಅವರನ್ನು ಹೊರತು ಪಡಿಸಿದರೆ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ವಿಜಯಪುರದಲ್ಲಿ ಯಾರಿಗೆ ಇವರು ಆಶೀರ್ವಾದ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರು ಅವರಿಗಿರುವ ಮೀಸಲಾತಿ ಬೆಂಬಲ ಪಡೆದು ಆಯ್ಕೆಯಾಗುತ್ತಾರೆ. ಅಲ್ಪಸಂಖ್ಯಾತರು, ಹಿಂದುಳಿದವರಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದಾರೆ ಎನ್ನುವುದು ಬಹಿರಂಗ ಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.

‘ಕುರುಬ, ಕಬ್ಬಲಿಗ ಹೆಚ್ಚಿರುವಂತಹ ಕ್ಷೇತ್ರಗಳಲ್ಲೂ ಅವರಿಗೆ ಸ್ಪರ್ಧೆಗೆ ಅವಕಾಶ ಸಿಗೋದಿಲ್ಲ. ಕೊಡಿಸುವ ಗೋಜಿಗೆ ಹೋಗಿಲ್ಲ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು