ಗುರುವಾರ , ಜೂನ್ 24, 2021
29 °C

ಅತಿವೃಷ್ಟಿ; ಪರಿಹಾರ ನೀಡಲು ಜೆಡಿಎಸ್‌ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ರೈತರ ಬೆಳೆ ಹಾನಿಯ ಪರಿಹಾರವಾಗಿ ಪ್ರತಿ ಎಕರೆಗೆ ₹ 20 ಸಾವಿರ ನೀಡಬೇಕು ಎಂದು ಒತ್ತಾಯಿಸಿ ಜಾತ್ಯತೀತ ಜನತಾದಳದ ಯುವ ಘಟಕದ ವತಿಯಿಂದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಹಾನಿಯ ಪ್ರಮಾಣವನ್ನು ಪರಿಶೀಲಿಸಿ ಮರು ಬಿತ್ತನೆ ಮಾಡಲು ಅಗತ್ಯ ಬೀಜಗಳನ್ನು ಒದಗಿಸಬೇಕು. ನಿಗಮ ಮಂಡಳಿಗಳ ನೇಮಕಾತಿಯನ್ನು ಕೂಡಲೇ ನಿಲ್ಲಿಸಿ ಮಳೆಯಿಂದ ಹಾನಿಗೊಳಗಾದ ಹೊಲ ಗದ್ದೆಗಳ ಬದು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಅಗತ್ಯ ಹಣಕಾಸು ನೆರವನ್ನು ಒದಗಿಸಬೇಕು. ಕಳೆದ ವರ್ಷದ ಪರಿಹಾರವನ್ನು ಕೊಡಬೇಕು ಎಂದು ಒತ್ತಾಯಿಸಿದರು.

ಯುವ ಘಟಕದ ಅಧ್ಯಕ್ಷ ಅಲೀಂ ಇನಾಂದಾರ, ಮುಖಂಡರಾದ ನಾಸಿರ್ ಹುಸೇನ್ ಉಸ್ತಾದ್, ಬಸವರಾಜ ತಡಕಲ್, ದೇವೇಗೌಡ ತೆಲ್ಲೂರ, ಸೈಯದ್‌ ಜಫರ್‌ ಹುಸೇನ್, ಮನೋಹರ ಪೊದ್ದಾರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು