ಕಾಳಗಿ: ತಾಲ್ಲೂಕಿನ ಮಾಡಬೂಳ ಗ್ರಾಮದ ಕಿರು ಮೃಗಾಲಯದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೀಪು ಮತ್ತು ಅಲ್ಟೊ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ಹಾಗೂ ಜೀಪ್ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ಸೇಡಂ ನಗರದ ಹರಳಯ್ಯ ಬಸಪ್ಪ ಗುಂಡನೋರ (58) ಮೃತರು. ಕಾರಿನಲ್ಲಿ ಐವರು ಪ್ರಯಾಣಿಕರೊಂದಿಗೆ ಇಬ್ಬರು ಮಕ್ಕಳಿದ್ದರು. ಕಾರು ಸೇಡಂನಿಂದ ಕಲಬುರಗಿ ಕಡೆಗೆ, ಜೀಪು ಕಲಬುರಗಿಯಿಂದ ಮಳಖೇಡಕ್ಕೆ ಬರುತ್ತಿತ್ತು.

ಈ ಮಧ್ಯೆ ಅಪಘಾತ ಸಂಭವಿಸಿದ್ದು ಕಾರು ಚಾಲಕ ಹಣಮಂತ ಭೀಮಶಾ ಸಾತನೂರ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಪ್ರಭಾರ ಸಿಪಿಐ ವನಂಜಯಕರ್, ಪಿಎಸ್ಐ ಗೌತಮ ಗುತ್ತೇದಾರ, ಕ್ರೈಂ ಪಿಎಸ್ಐ ಸಿದ್ದಲಿಂಗ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.