ಜೇವರ್ಗಿ: ‘ಡಾ.ಅಂಬೇಡ್ಕರ್ ಜಯಂ ತಿಯ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಭವನದ ಬಳಿ ಮೇ 15ರಿಂದ 17ರವರೆಗೆ ‘ಡಾ.ಅಂಬೇಡ್ಕರ್ ಅರಿವು ಉತ್ಸವ-2026’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪುಂಡಲೀಕ ಗಾಯಕವಾಡ ತಿಳಿಸಿದ್ದಾರೆ.

ಪಟ್ಟಣದ ಅಂಬೇಡ್ಕರ್ ಭವನದ ಬಳಿ ವೇದಿಕೆ ಪೂರ್ವಸಿದ್ಧತೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘15ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಗೌತಮ ಬುದ್ಧರ ಮೂರ್ತಿ ಮೆರವಣಿಗೆಗೆ ಜಿ.ಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಚಾಲನೆ ನೀಡಲಿದ್ದು, ಆಣದೂರ ವರಜ್ಯೋತಿ ಭಂತೇಜಿ, ನೆಲೋಗಿ ಸಿದ್ಧಲಿಂಗ ಸ್ವಾಮೀಜಿ, ಚಿತ್ರದುರ್ಗದ ಬಸವನಾಗಿದೇವ ಶರಣರು ಸಾನ್ನಿಧ್ಯ ವಹಿಸುವರು’ ಎಂದು ತಿಳಿಸಿದರು.

ಜಿ.ಪಂ ಮಾಜಿ ಸದಸ್ಯ ಚಂದ್ರಶೇಖರ ಹರನಾಳ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುಂಡಲೀಕ ಗಾಯಕವಾಡ ಅಧ್ಯಕ್ಷತೆ ವಹಿಸುವರು. ಚಿಂತಕ ಸುರೇಶ ಗೌತಮ, ಪತ್ರಕರ್ತ ಶಿವರಂಜನ ಸತ್ಯಂಪೇಟ ಉಪನ್ಯಾಸ ನೀಡುವರು. 16ರಂದು ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಸೊನ್ನದ ಶಿವಾನಂದ ಸ್ವಾಮೀಜಿ, ಯಡ್ರಾಮಿ ಸಿದ್ದಲಿಂಗ ಸ್ವಾಮೀಜಿ, ಚಿಗರಳ್ಳಿ ಸಿದ್ದಬಸವ ಕಬೀರಾನಂದ ಸ್ವಾಮೀಜಿ ವಹಿಸುವರು. ಸರ್ಕಾರಿ ಪದವಿ ಕಾಲೇಜಿನ ಶಾಂತಾ ಅಷ್ಠಗಿ, ಚಂದ್ರಶೇಖರ ಕಟ್ಟಿಮನಿ ಮುಖ್ಯ ಭಾಷಣ ಮಾಡಲಿದ್ದಾರೆ’ ಎಂದು ಹೇಳಿದರು.

‘17ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಮೆರವಣಿಗೆಗೆ ಪಿಎಸ್ಐ ಗಜಾನಂದ ಬಿರಾದಾರ ಚಾಲನೆ ನೀಡುವರು. ಸಂಜೆ ನಡೆಯಲಿರುವ ಕಾರ್ಯಕ್ರಮವನ್ನು ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಜ್ಯೋತಿ ಬೆಳಗಿಸುವರು. ಚಿಂತಕ ರಾಜರತ್ನ ಅಂಬೇಡ್ಕರ್ ಮುಖ್ಯ ಭಾಷಣ ಮಾಡಲಿದ್ದಾರೆ. ಜ್ಞಾನ ಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ವಿವರಿಸಿದರು.

ಸಮಿತಿ ಗೌರವಾಧ್ಯಕ್ಷ ಶಾಂತಪ್ಪ ಯಲಗೋಡ, ಸುಭಾಷ ಚನ್ನೂರ, ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ರಾಯಪ್ಪ ಬಾರಿಗಿಡ, ಬೆಣ್ಣೆಪ್ಪ ಕೊಂಬಿನ್, ರಾಜಶೇಖರ ಶಿಲ್ಪಿ, ಶ್ರೀಹರಿ ಕರಕಿಹಳ್ಳಿ, ಸಿದ್ರಾಮ ಕಟ್ಟಿ, ಪ್ರಭಾಕರ ಸಾಗರ, ಸಂಗಣ್ಣ ಕಟ್ಟಿಸಂಗಾವಿ ಸೇರಿದಂತೆ ಹಲವಾರು ಜನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-31-1755218393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.