ಜೇವರ್ಗಿ: ‘ಬಸವ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲು ಎಲ್ಲರ ಸಹಕಾರ ಅಗತ್ಯ’ ಎಂದು ಬಸವ ಜಯಂತಿ ಉತ್ಸವ ಸಮಿತಿ ಜಿಲ್ಲಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ ಹೇಳಿದರು.

ಪಟ್ಟಣದ ವಿಜಯಪುರ ರಸ್ತೆಯ ಗುರುಕುಲ ಶಾಲೆಯ ಆವರಣದಲ್ಲಿ ನಡೆದ ಬಸವಜಯಂತಿ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಲಬುರಗಿ ನಗರದಲ್ಲಿ ಜಗತ್ ಸರ್ಕಲ್ ಹತ್ತಿರದ ಬಸವ ಪುತ್ಥಳಿ ಬಳಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿ ವರ್ಷ 2-3 ಗುಂಪುಗಳಾಗಿ ಆಚರಣೆ ಮಾಡಲಾಗುತ್ತಿತ್ತು, ಪ್ರಸಕ್ತ ವರ್ಷ ಎಲ್ಲಾ ಸಂಘಟನೆಗಳನ್ನು ಒಗ್ಗೂಡಿಸಿ ಒಂದೇ ಕಡೆ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬಸವಣ್ಣನವರು ಸೇರಿದಂತೆ 12 ನೇ ಶತಮಾನದ ಎಲ್ಲಾ ಕಾಯಕ ಶರಣರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಗುತ್ತಿದೆ. ಜಯಂತ್ಯುತ್ಸವದಲ್ಲಿ ಬಸವಣ್ಣನವರ ಭಾವಚಿತ್ರ ಹೊರತುಪಡಿಸಿ ಬೇರೆ ಭಾವಚಿತ್ರ ಬಳಸಬಾರದು. ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲ್ಲೂಕುಗಳಿಂದ 5 ಸಾವಿರಕ್ಕೂ ಹೆಚ್ಚು ಬಸವಾಭಿಮಾನಿಗಳು ಜಯಂತ್ಯುತ್ಸವದಲ್ಲಿ ಭಾಗವಹಿಸಿ’ ಎಂದು ಮನವಿ ಮಾಡಿದರು.

ಜಯಂತ್ಯುತ್ಸವ ಸಮಿತಿ ಗೌರವಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಮರನಾಥ ಪಾಟೀಲ, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ರವೀಂದ್ರ ಶಾಬಾದಿ, ಆರ್.ಜಿ.ಶೆಟಗಾರ, ಸೋಮಶೇಖರ ಹಿರೇಮಠ, ಷಣ್ಮುಖಪ್ಪ ಹಿರೇಗೌಡ, ರಾಜಶೇಖರ ಸೀರಿ, ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-31-502957355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.