ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇವರ್ಗಿ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Last Updated 14 ಜನವರಿ 2022, 6:25 IST
ಅಕ್ಷರ ಗಾತ್ರ

ಕಲಬುರಗಿ: ಜೇವರ್ಗಿ ತಾಲ್ಲೂಕಿನ ಮುದಬಾಳ (ಬಿ) ಗ್ರಾಮದ ಮುಖ್ಯ ಕಾಲುವೆಯಲ್ಲಿ ಅಂದಾಜು 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.

ಶವ ಕಾಲುವೆಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಕೊಲೆ ಮಾಡಿರುವ ಕುರಿತು ಯಾವುದೇ ಕುರುಹು ಪತ್ತೆಯಾಗಿಲ್ಲ. ಆದರೆ, ವ್ಯಕ್ತಿ ಸಾವನ್ನಪ್ಪಿ ಮೂರ್ನಾಲ್ಕು ದಿನಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿಯ ಬಲಗೈಯಲ್ಲಿ ಹನುಮಂತ ಮತ್ತು ಎಡಗೈಯಲ್ಲಿ ‘ಮಾನಂದ’ ಟ್ಯಾಟು ಇದೆ. ವ್ಯಕ್ತಿಯ ಕುರಿತು ಮಾಹಿತಿ ಲಭ್ಯವಾದರೆ ಜೇವರ್ಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪಿಎಸ್‌ಐ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT