ಜೇವರ್ಗಿ: ತಾಲ್ಲೂಕಿನ ಸುಕ್ಷೇತ್ರ ಗಂವ್ಹಾರ ಗ್ರಾಮದ ಜಗದ್ಗುರು ಶ್ರೀ ಬನ್ನಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏ.20ರ ಸೋಮವಾರ ಸಂಭ್ರಮದ ರಥೋತ್ಸವ ಜರುಗಲಿದೆ.

ವಿಶ್ವರಾಧ್ಯ ಸಿದ್ಧ ಸಂಸ್ಥಾನ ಮಠ ಅಬ್ಬೆತುಮಕೂರ ಹಾಗೂ ಗಂವ್ಹಾರ ಪಂಚಗ್ರಹ ತೋಪಕಟ್ಟಿ ಹಿರೇಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕ್ಷೇತ್ರದ ಕಿರಿಯ ಶ್ರೀಗಳಾದ ಶಿವಶೇಖರ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

ಸೋಮವಾರ ಬೆಳಿಗ್ಗೆ 6 ಗಂಟೆಗೆ ಬನ್ನಿಬಸವನ ಕರ್ತೃ ಗದ್ದುಗೆ ರುದ್ರಾಭಿಷೇಕ ಹಾಗೂ ಮಹಾ ಪೂಜೆ, ಬೆಳಿಗ್ಗೆ 9 ಗಂಟೆಗೆ ರಥದ ಪೂಜೆ ಮತ್ತು ಕಳಸಾರೋಹಣ, ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ನಂದಿಕೋಲು ಮೆರವಣಿಗೆ ಸಕಲ ವಾದ್ಯಮೇಳ ಹಾಗೂ ವೈಭವಗಳೊಂದಿಗೆ ಶ್ರೀ ಅಮೃತೇಶ್ವರ ದೇವಸ್ಥಾನದಿಂದ ಶ್ರೀ ಬನ್ನಿ ಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ.

ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಜಯಘೋಷಗಳ ನಡುವೆ ಅದ್ದೂರಿ ರಥೋತ್ಸವ ಜರುಗಲಿದೆ. ರಾತ್ರಿ 8 ಗಂಟೆಗೆ ಧರ್ಮ ಸಭೆ, ರಾತ್ರಿ 10 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ. 21ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಂಗಿ ಕುಸ್ತಿ ನಡೆಯಲಿವೆ ಎಂದು ಶ್ರೀ ಮಠದ ಸದ್ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-463791624

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.