ಜೇವರ್ಗಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ಬುಧವಾರ ಸಂಜೆ ಸಂಭವಿಸಿದೆ.

ತಾಲ್ಲೂಕಿನ ಕಟ್ಟಿಸಂಗಾವಿ ಗ್ರಾಮದ ಲಕ್ಷ್ಮೀಕಾಂತ ಬಾಲಚಂದ್ರರಾವ ಕುಲಕರ್ಣಿ (47) ಎಂಬುವವರೇ ಅಪಘಾತದಲ್ಲಿ ಮೃತಪಟ್ಟವರು. ಸರ್ವೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀಕಾಂತ ಕೆಲಸ ಮುಗಿಸಿಕೊಂಡು ಮರಳಿ ಸ್ವಗ್ರಾಮ ಕಟ್ಟಿಸಂಗಾವಿ ಕಡೆ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಕಲಬುರಗಿ ಕಡೆಯಿಂದ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್ಐ ಗಜಾನಂದ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-34-1038422160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.