ಜೇವರ್ಗಿ: ಕುರುಬ ಸಮಾಜ ವಿಶಿಷ್ಟ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಸಮಾಜದ ಇತಿಹಾಸ, ಸಂಸ್ಕೃತಿಯನ್ನು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶ ಹೊಂದಿದೆ. ಸಮಾಜದ ಪ್ರತಿಯೊಬ್ಬರೂ ಕುರುಬರ ಇತಿಹಾಸ ತಿಳಿದುಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಪಟ್ಟಣದ ಧರ್ಮಸಿಂಗ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ವಾಭಿಮಾನಿಗಳ ಸೈನ್ಯ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ರಾಯಣ್ಣನವರ 195ನೇ ಹುತಾತ್ಮ ದಿನಾಚರಣೆ ಹಾಗೂ 1,001 ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದ ಮುಖಂಡರು ಮುಂದಿನ ಪೀಳಿಗೆಗೆ ಸಂಸ್ಕೃತಿ ರವಾನಿಸಲು ಜಾಗೃತಿ ಮೂಡಿಸಬೇಕು. ಅನೇಕರಿಗೆ ಕುರುಬ ಸಮಾಜದ ಇತಿಹಾಸ ತಿಳಿದಿಲ್ಲ. ಇತಿಹಾಸ ಹಾಗೂ ಬೆಳೆದುಬಂದ ದಾರಿಯನ್ನು ಸಮಾಜದ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಸಮಾಜ ಅಭಿವೃದ್ಧಿಯಾಗಬೇಕಾದರೆ ರಾಜಕೀಯ ಅಧಿಕಾರ ಮುಖ್ಯ. ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬಂದಾಗ ಬಹುರೂಪಿ ಸಮಾಜ ನಿರ್ಮಾಣ ಸಾಧ್ಯ’ ಎಂದರು.

‘ಕುರುಬ ಸಮಾಜ ಇನ್ನೂ ಸಾಕಷ್ಟು ಸಂಘಟನೆಗೊಳ್ಳುವ ಅವಶ್ಯಕತೆ ಇದೆ. ಆ ದಿಸೆಯಲ್ಲಿ ಸಮಾಜ ಬಾಂಧವರು ಸಂಘಟನೆಗೆ ಆದ್ಯತೆ ನೀಡಬೇಕು ಹಾಗೂ ಸಮಾಜದ ಒಳಿತಿಗಾಗಿ ಶ್ರಮಿಸಬೇಕು’ ಎಂದು ಹೇಳಿದರು.

‘ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಹೆಚ್ಚು ಅಂಟಿಕೊಳ್ಳುತ್ತಿದ್ದಾರೆ. ಇದಕ್ಕೆ ಹಿರಿಯರು ಕಡಿವಾಣ ಹಾಕಬೇಕು’ ಎಂದರು.

ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ ಸಿಂಗ್ ಮಾತನಾಡಿ, ‘ಸಾಂಸ್ಕೃತಿಕ ಇತಿಹಾಸ ಇರುವ ಕುರುಬ ಸಮಾಜಕ್ಕೆ ತನ್ನದೇ ಆದ ಚಾರಿತ್ರಿಕ ಹಿನ್ನೆಲೆ ಇದೆ. ರಾಷ್ಟ್ರಕ್ಕೆ ಸಮಾಜದ ಕೊಡುಗೆ ಅಪಾರ. ರಾಜ್ಯದಲ್ಲಿ ಮೂರನೇ ದೊಡ್ಡ ಜನಸಂಖ್ಯೆ ಇದೆ. ಕ್ಷೇತ್ರದಲ್ಲಿ ಕುರುಬ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಲಾಗುತ್ತಿದೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಅಧ್ಯಕ್ಷ ತಮ್ಮಣ್ಣ ಬಾಗೇವಾಡಿ ಪ್ರಾಸ್ತಾವಿಕ ಮಾತನಾಡಿದರು. ಸೊನ್ನದ ಶಿವಾನಂದ ಸ್ವಾಮೀಜಿ, ಜೇರಟಗಿಯ ಮಹಾಂತ ಸ್ವಾಮೀಜಿ, ಯಡ್ರಾಮಿಯ ಸಿದ್ದಲಿಂಗ ಸ್ವಾಮೀಜಿ, ಬಸವಪಟ್ಟಣದ ಮರೆಪ್ಪ ಶರಣರು ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು.

ಕಾಂಗ್ರೆಸ್ ಮುಖಂಡ ರಾಜಶೇಖರ ಸೀರಿ, ಜಿ.ಪಂ ಮಾಜಿ ಸದಸ್ಯರಾದ ಶೋಭಾ ಬಾಣಿ, ಶಾಂತಪ್ಪ ಕೂಡಲಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶೌಕತ್ ಅಲಿ ಆಲೂರ, ಶಂಕರ ಕಟ್ಟಿಸಂಗಾವಿ, ವಸಂತರಾವ ನರಿಬೋಳ, ಬಾಬು ಪಾಟೀಲ ಮುತ್ತಕೋಡ, ಪ್ರತಾಪ ಕಟ್ಟಿ, ಮೈಲಾರಿ ಗುಡೂರ, ಸಂತೋಷ ಮಲ್ಲಾಬಾದ, ಈರಣ್ಣ ಬಿದರಾಣಿ, ಬಸವರಾಜ ಬಾಗೇವಾಡಿ, ಭಗವಂತ್ರಾಯ ಬೆಣ್ಣೂರ, ಗಿರೀಶ ತುಂಬಗಿ ಭಾಗವಹಿಸಿದ್ದರು.

ನಂತರ ಕುರುಬ ಸಮಾಜ ಸೇರಿದಂತೆ ಎಲ್ಲಾ ಸಮುದಾಯದ 1,001 ಜನ ಸಾಧಕರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕ ಎಸ್.ಎಸ್.ಮಾಲಿಬಿರಾದಾರ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260318-31-891118425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.