ಜೇವರ್ಗಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಹತ್ತಿರ ಸರಾಯಿ ಕುಡಿದು ಸಾವನ್ನಪ್ಪಿದ ವ್ಯಕ್ತಿಯ ಶವದೊಂದಿಗೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ಬೆಳಿಗ್ಗೆ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆದಿದೆ.

ಪಟ್ಟಣದ ಜೋಪಡಪಟ್ಟಿ ಬಡಾವಣೆ ನಿವಾಸಿ ಅಬ್ದುಲ್ ಮಾಜೀದ್ ಮಿಟ್ಟೇಸಾಬ ಮೋರಟಗಿ (42) ಎಂಬುವವರು ಶುಕ್ರವಾರ ಬೆಳಿಗ್ಗೆ ಮದ್ಯ ಕುಡಿದು ಸಾವನ್ನಪ್ಪಿದ್ದು, ಈ ವ್ಯಕ್ತಿಯ ಸಾವಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳೇ ನೇರವಾಗಿ ಹೊಣೆಗಾರರು ಎಂದು ಆರೋಪಿಸಿ ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಹಾಗೂ ಟಿಪ್ಪು ಸುಲ್ತಾನ್ ಕಮಿಟಿ ಪದಾಧಿಕಾರಿಗಳು ಬೀದರ್–ಬೆಂಗಳೂರು ಹೆದ್ದಾರಿ ತಡೆದು ಅಬಕಾರಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಹಲವಾರು ಬಡಾವಣೆಗಳಲ್ಲಿ ಮದ್ಯ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಹಲವಾರು ಬಾರಿ ಅಬಕಾರಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಬಕಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಾಜೀದ್ ಮೃತಪಟ್ಟಿದ್ದು, ಅವರ ಕುಟುಂಬ ಬೀದಿಗೆ ಬೀಳುವಂತಾಗಿದೆ. ಈ ಸಾವಿಗೆ ಅಬಕಾರಿ ಅಧಿಕಾರಿಗಳೇ ನೇರವಾಗಿ ಹೊಣೆಯಾಗಿದ್ದು, ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಕೂಡಲೇ ಅಬಕಾರಿ ಇನ್ಸ್ಪೆಕ್ಟರ್ ರೇವಣಸಿದ್ದಪ್ಪ ಹೂಗಾರ ಹಾಗೂ ಶರಣಪ್ಪ ಎಂಬುವರ ಮೇಲೆ ಎಫ್ಐಆರ್ ದಾಖಲು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಮಿಟಿ ಅಧ್ಯಕ್ಷ ಮೋಹಿಯುದ್ದೀನ್ ಇನಾಮದಾರ ಪಟ್ಟುಹಿಡಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಪಿಎಸ್ಐ ಗಜಾನನ ಬಿರಾದಾರ ಭೇಟಿ ನೀಡಿ ಪ್ರತಿಭಟನಾನಿರತರೊಂದಿಗೆ ಮಾತನಾಡಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ನಂತರ ಪಿಎಸ್ಐ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪುರಸಭೆ ಮಾಜಿ ಸದಸ್ಯ ಹಿಬೂಬಸಾಬ ಚನ್ನೂರ, ಇಬ್ರಾಹಿಂ ಪಟೇಲ, ದಾವಲಸಾಬ ಇನಾಮದಾರ, ಗೌಸ್ ಇನಾಮದಾರ, ಶೇಖ್ ಸದ್ದಾಮ್, ಬಾವಾಸಾಬ ಭೋಸಗಾ, ಜಾವೀದ್ ಸೇರಿದಂತೆ ಹಲವಾರು ಜನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-34-1000956929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.