ಜೇವರ್ಗಿ: ಗಾಳಿಗೆ ಹಾರಿ ರಸ್ತೆ ಮಧ್ಯ ಬಿದ್ದ ತನ್ನ ಹಾಲ್ ಟಿಕೆಟ್ ತೆಗೆದುಕೊಳ್ಳಲು ಹೋಗಿ ಪಿಯು ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಸೋಮವಾರ ಮಧ್ಯಾಹ್ನ ಚಿಗರಳ್ಳಿ ಕ್ರಾಸ್ ಹತ್ತಿರ ಸಂಭವಿಸಿದೆ.

ಯಡ್ರಾಮಿ ಪಟ್ಟಣದ ದ್ವಿತೀಯ ಪಿಯು ವಿದ್ಯಾರ್ಥಿ ಆದರ್ಶ ಮಡಿವಾಳಪ್ಪ ಗುರುಶೆಟ್ಟಿ (18) ಮೃತಪಟ್ಟವರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲು ತನ್ನ ಸ್ನೇಹಿತರೊಂದಿಗೆ ಯಡ್ರಾಮಿ ಪಟ್ಟಣದಿಂದ ಜೇವರ್ಗಿ ಪಟ್ಟಣಕ್ಕೆ ಸೋಮವಾರ ಬೆಳಿಗ್ಗೆ ಬಂದಿದ್ದರು. ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಮರಳಿ ದ್ವಿಚಕ್ರ ವಾಹನದಲ್ಲಿ ಯಡ್ರಾಮಿಗೆ ತೆರಳುವ ಸಂದರ್ಭದಲ್ಲಿ ಚಿಗರಳ್ಳಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬದಿಯ ಭಾರತ್ ಪೆಟ್ರೋಲ್ ಬಂಕ್ ಬಳಿ ಮೂತ್ರ ವಿಸರ್ಜನೆಗೆ ಬೈಕ್ ನಿಲ್ಲಿಸುವ ವೇಳೆ ಪರೀಕ್ಷೆಯ ಹಾಲ್ ಟಿಕೆಟ್ ಗಾಳಿಗೆ ಹಾರಿ ಹೆದ್ದಾರಿ ಮೇಲೆ ಬಿದ್ದಿದೆ. ಈ ವೇಳೆ ಹಾಲ್ ಟಿಕೆಟ್ ತೆಗೆದುಕೊಳ್ಳಲು ಹೋದ ಆದರ್ಶನಿಗೆ ಶಹಾಪುರ ಕಡೆಯಿಂದ ವೇಗವಾಗಿ ಬರುತ್ತಿದ್ದ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಜೇವರ್ಗಿ ಪಿಎಸ್ಐ ಗಜಾನನ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-34-180598473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.