ಜೇವರ್ಗಿ: ಧಾರ್ಮಿಕ ಕಾರ್ಯಕ್ರಮಗಳ ಮೂಲಕವೇ ನಾಡಿನಲ್ಲಿ ಶಾಂತಿ, ಸೌಹಾರ್ದ ಮೂಡಲು ಸಾಧ್ಯ ಎಂದು ನೆಲೋಗಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ನೀರಲಕೋಡ ಗ್ರಾಮದ ಅಂಬಾಭವಾನಿ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಅಂಗವಾಗಿ ಆಯೋಜಿಸಲಾಗಿದ್ದ ಗುಡ್ಡಾಪೂರದ ದಾನಮ್ಮದೇವಿ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತ ದೇಶ ಧರ್ಮ ಪ್ರಧಾನ ದೇಶವಾಗಿದ್ದು, ಹತ್ತಾರು ಧರ್ಮಗಳು, ಪರಂಪರೆಗಳು ಅಸ್ತಿತ್ವದಲ್ಲಿವೆ. ಎಲ್ಲ ಧರ್ಮ, ಪರಂಪರೆಗಳ ಆಚರಣೆ ವಿಭಿನ್ನವಾಗಿದ್ದರೂ ದೇವರಲ್ಲಿ ಲೀನವಾಗುವುದೇ ಆಗಿದೆ ಎಂದರು.

ಸೊನ್ನ ಸಿದ್ದಲಿಂಗೇಶ್ವರ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಪುರಾಣ ದಾಸೋಹಗೈದರು. ಕಡಕೋಳ ಮಡಿವಾಳೇಶ್ವರ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರ ಬಿರಾದಾರ, ರಾಜಶೇಖರ ಮುದ್ದಾ, ಭೀಮಾಶಂಕರ ಕಾಚಾಪೂರ, ಭೂತಾಳಿ ಭಾಸಗಿ, ಬಸವರಾಜ ಗುಳಗಿ, ಸೂಗಯ್ಯಸ್ವಾಮಿ ಹಿರೇಮಠ, ಶರಣಪ್ಪಗೌಡ ಪಾಟೀಲ, ಬಾಪುಗೌಡ ಪಾಟೀಲ, ಯಶವಂತ್ರಾಯಗೌಡ ಪಾಟೀಲ, ರಾಜಶೇಖರ ಕೊಂಗಂಡಿ ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-31-672255112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.