ಜೇವರ್ಗಿ: ದೇಶಾದ್ಯಂತ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಶ್ರೀರಾಮ ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ತಹಶೀಲ್ದಾರ್ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ದೇಸಾಯಿ ಜೇರಟಗಿ ಮಾತನಾಡಿ, ‘ಇತ್ತೀಚಿಗೆ ಜಿಲ್ಲೆಯಲ್ಲಿ ಗೋವುಗಳ ಸಾಗಾಟ ಹೆಚ್ಚಾಗಿದೆ. ಅವುಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಗೋಮಾತೆಯನ್ನು ರಾಷ್ಟ್ರ ಮಾತೆಯನ್ನಾಗಿ ಘೋಷಿಸಬೇಕು. ದೇಶದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.

ಆನಂದ ದೇಸಾಯಿ ಮಾತನಾಡಿ, ‘ಜೇರಟಗಿ ಹಾಗೂ ಚಿಗರಳ್ಳಿ ಚೆಕ್ಪೋಸ್ಟ್ ಸ್ಥಾಪಿಸಿ ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕು. ಇಲ್ಲಿ ಸಂಚರಿಸುವ ಎಲ್ಲಾ ವಾಹನಗಳ ತಪಾಸಣೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿದರೇ ಜಿಲ್ಲೆಯಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ನಂತರ ಗ್ರೇಡ್-2 ತಹಶೀಲ್ದಾರ್ ಗೋಪಾಲ ಕಪೂರ್ ಅವರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆ ಪ್ರಧಾನ ಕಾರ್ಯದರ್ಶಿ ಚಂದ್ರು ಬಣಮಿಗಿ, ಸಿದ್ದು ಪಾಟೀಲ, ಸಂತೋಷ ಮಲ್ಲಾಬಾದ, ಸೂರಿ ಹಿಪ್ಪರಗಿ, ಮಂಜುಗೌಡ ಪಾಟೀಲ, ಪ್ರವೀಣ ಸುಬೇದಾರ, ರಾಜು ಗುತ್ತೇದಾರ, ಗಿರೀಶ ಗುತ್ತೇದಾರ, ನವೀನ್, ಜೀವನ್ ಜೇವರ್ಗಿ, ಅಶೋಕ್ ಜೇರಟಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-31-1080661896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.