ಬುಧವಾರ, ಸೆಪ್ಟೆಂಬರ್ 22, 2021
25 °C

ಕಾಟಾಚಾರದ ಪ್ರವಾಹ ವೀಕ್ಷಣೆ: ಶಾಸಕ ಅಜಯ ಸಿಂಗ್ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ (ಕಲಬುರ್ಗಿ ಜಿಲ್ಲೆ): ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಶುಕ್ರವಾರ ಕಲಬುರ್ಗಿ ಜಿಲ್ಲೆಗೆ ಭೇಟಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ ಅವರು ಜೇವರ್ಗಿ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲಿಲ್ಲ. ಜನರ ಸಮಸ್ಯೆಗಳನ್ನು ಆಲಿಸಲಿಲ್ಲ ಎಂದು ಜೇವರ್ಗಿ ಶಾಸಕ ಅಜಯ್ ಸಿಂಗ್ ಆರೋಪಿಸಿದರು.

ಜೇವರ್ಗಿ ತಾಲ್ಲೂಕಿನ ಇಂತಿಂಥ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಕೋರಿದ್ದೆವು. ಆದರೆ, ಅವರು ಸಮರ್ಪಕವಾಗಿ ವೀಕ್ಷಿಸಲಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರವಾಹ ಪರಿಸ್ಥಿತಿಯ ವೀಕ್ಷಣೆಗೆ ಬಂದಿರುವ ಸಚಿವರು ಈ ಭಾಗದ ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸಬೇಕು.  ಪ್ರವಾಹ ಸಮಸ್ಯೆ ನಿವಾರಿಸುವ, ಪರಿಹಾರ ಘೋಷಿಸುವ ಮತ್ತು ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಆದರೆ, ಇದ್ಯಾವುದನ್ನು ಅವರು ಮಾಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು