ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇವರ್ಗಿ: ಆಮ್ಲಜನಕ ಘಟಕ ಪರಿಶೀಲನೆ, ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ

Last Updated 31 ಡಿಸೆಂಬರ್ 2021, 5:04 IST
ಅಕ್ಷರ ಗಾತ್ರ

ಜೇವರ್ಗಿ: ’ಓಮೈಕ್ರಾನ್ ವೈರಸ್‌ನ ಭಯ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣ ದಾಖಲಾಗುತ್ತಿವೆ. ಸೋಂಕು ತಡೆಗೆ ಮುಂಜಾಗೃತೆ ಕ್ರಮ ತೆಗೆದುಕೊಳ್ಳುವುದು ಅಗತ್ಯ’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಿರುವ ಆಮ್ಲಜನಕ ಘಟಕವನ್ನು ಗುರುವಾರ ವೀಕ್ಷಣೆ ಮಾಡಿದ ಶಾಸಕ ಅಜಯ್ ಸಿಂಗ್‌ ಅವರು ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಪತ್ರಕರ್ತರೊಂದಿಗೆಮಾತನಾಡಿದರು.

ಓಮೈಕ್ರಾನ್ ಸೋಂಕು ತಡೆಗಟ್ಟಲು ತಾಲ್ಲೂಕಿನ ಎಲ್ಲಾ ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೂಕ್ತ ವ್ಯವಸ್ಥೆಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲ ಅವರಿಗೆ ಶಾಸಕರು ತಾಕೀತು ಮಾಡಿದರು.

ತಾಲ್ಲೂಕು ಆಸ್ಪತ್ರೆ ಪರಿಶೀಲನೆಗೆ ಮುಂಚೆ ತಾಲ್ಲೂಕಿನ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಓಮೈಕ್ರಾನ್ ಸೋಂಕು ತಡೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಶಾಸಕರ ಭೇಟಿ ವೇಳೆ ಜೇವರ್ಗಿ, ಯಡ್ರಾಮಿಮತ್ತು ನೆಲೋಗಿ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕಿನಲ್ಲಿರುವ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT