ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋರಾಟಗಾರನ ಕಾಲಿಗೆ ಬಿದ್ದ ಪ್ರೊಬೆಷನರಿ ತಹಶೀಲ್ದಾರ್

Published 3 ನವೆಂಬರ್ 2023, 16:07 IST
Last Updated 3 ನವೆಂಬರ್ 2023, 16:07 IST
ಅಕ್ಷರ ಗಾತ್ರ

ಕಲಬುರಗಿ: ಜೇವರ್ಗಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರೊಬೆಷನರಿ ತಹಶೀಲ್ದಾರ್ ಗಜಾನನ ಬಾಳೆ ಅವರು ಕನ್ನಡಪರ ಹೋರಾಟಗಾರನ ಕಾಲಿಗೆ ಬಿದ್ದು ಮನವಿ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನವೆಂಬರ್‌ 1ರಂದು ಜೇವರ್ಗಿ ತಾಲ್ಲೂಕು ಆಡಳಿತ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿತ್ತು. ಬಹುತೇಕ ಸರ್ಕಾರಿ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಇದನ್ನು ಖಂಡಿಸಿದ ಕನ್ನಡಪರ ಸಂಘಟನೆಗಳ ಮುಖಂಡರು ವೇದಿಕೆಯ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಗಜಾನನ ಬಾಳೆ ಅವರು ಗೈರಾದ ಅಧಿಕಾರಿಗಳಿಗೆ ಫೋನ್ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬಳಿಕ ಪ್ರತಿಭಟನೆಯನ್ನು ಕೈಬಿಡುವಂತೆ ಕೋರಿ ಹೋರಾಟಗಾರರ ಕಾಲಿಗೆ ಬಿದ್ದು ಮನವಿ ಮಾಡಿದ್ದರು. ಕಾಲಿಗೆ ಬೀಳದಂತೆ ಕೈಮುಗಿದು ಹೋರಾಟಗಾರರು ಮೇಲೆದ್ದ ದೃಶ್ಯಗಳು ವಿಡಿಯೊದಲ್ಲಿವೆ.

ರಾಜ್ಯೋತ್ಸವಕ್ಕೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಹೋರಾಟಗಾರರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT