ಬಿಜೆಪಿ ಸೇರುವುದು ಶುದ್ಧ ಸುಳ್ಳು: ಅಫಜಲಪುರ ಕ್ಷೇತ್ರ ಶಾಸಕ ಎಂ.ವೈ.ಪಾಟೀಲ

ಬುಧವಾರ, ಜೂನ್ 19, 2019
26 °C

ಬಿಜೆಪಿ ಸೇರುವುದು ಶುದ್ಧ ಸುಳ್ಳು: ಅಫಜಲಪುರ ಕ್ಷೇತ್ರ ಶಾಸಕ ಎಂ.ವೈ.ಪಾಟೀಲ

Published:
Updated:
Prajavani

ಕಲಬುರ್ಗಿ: ‘ನಾನು ಬಿಜೆಪಿ ಸೇರುವುದು ಶುದ್ಧ ಸುಳ್ಳು. ಬಿಜೆಪಿಯವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ’ ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವು ನನ್ನ ರಾಜಕೀಯ ಜೀವನದ ಕೊನೆಯ ದಿನಗಳು. ಹಾಗಾಗಿ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಕಾರ್ಯಕರ್ತರು ಬಿಜೆಪಿ ಸೇರುವಂತೆ ಸೂಚಿಸಿದರೂ, ಅವರ ಮನ ಪರಿವರ್ತಿಸಿ ಕಾಂಗ್ರೆಸ್‌ನಲ್ಲೇ ಇರುತ್ತೇನೆ. 40 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು–ಬೀಳುಗಳನ್ನು ಕಂಡಿದ್ದೇನೆ’ ಎಂದು ತಿಳಿಸಿದರು.

‘ಅಫಜಲಪುರ ತಾಲ್ಲೂಕಿನಲ್ಲಿ ಬಿಜೆಪಿಗೆ 35 ಸಾವಿರ ಲೀಡ್ ಬಂದಿದೆ. ಈ ಬಗ್ಗೆ ಸಾಕಷ್ಟು ಜನರು ಮಾತನಾಡಿಕೊಂಡಿದ್ದಾರೆ. ನನ್ನ ಚುನಾವಣೆಗಿಂತ ಹೆಚ್ಚು ಕೆಲಸ ಮಾಡಿದ್ದೇನೆ. ಆದರೆ, ಜನರು ವ್ಯತಿರಿಕ್ತವಾಗಿ ತೀರ್ಪು ಕೊಟ್ಟಿದ್ದಾರೆ. ದೇಶದೆಲ್ಲೆಡೆ ಕೂಡ ಇದೇ ರೀತಿ ತೀರ್ಪು ಬಂದಿದೆ. ಈ ಬಗ್ಗೆ ಚರ್ಚಿಸಲು ಕಾರ್ಯಕರ್ತರ ಸಭೆ ಕರೆದಿದ್ದೇನೆ. ನನ್ನ ಆಡಳಿತದಲ್ಲಿ ಎಲ್ಲಾದರೂ ವೈಫಲ್ಯವಾಗಿದೆಯೇ ಎಂಬುದರ ಬಗ್ಗೆಯೂ ಚರ್ಚಿಸುತ್ತೇನೆ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 4

  Sad
 • 0

  Frustrated
 • 1

  Angry

Comments:

0 comments

Write the first review for this !