ಬೆಂಬಲ ಬೆಲೆಯಡಿ ಬಿಳಿಜೋಳ ಮಾರುವವರೇ ಇಲ್ಲ!

7

ಬೆಂಬಲ ಬೆಲೆಯಡಿ ಬಿಳಿಜೋಳ ಮಾರುವವರೇ ಇಲ್ಲ!

Published:
Updated:
Prajavani

ಕಲಬುರ್ಗಿ: ಬೆಂಬಲ ಬೆಲೆಯಡಿ ಬಿಳಿಜೋಳ (ಮಾಲ್ಡಂಡಿ) ಖರೀದಿಸಲು ರಾಜ್ಯ ಸರ್ಕಾರ ಎಲ್ಲ ತಾಲ್ಲೂಕುಗಳ ಎಪಿಎಂಸಿಗಳಲ್ಲಿ ಖರೀದಿ ಕೇಂದ್ರ ಆರಂಭಿಸಿದೆ. ಆದರೆ, ಜಿಲ್ಲೆಯಲ್ಲಿ ಯಾವೊಬ್ಬ ರೈತರೂ ಬಿಳಿಜೋಳ ಮಾರಾಟಕ್ಕೆ ಈ ವರೆಗೆ ನೋಂದಣಿಯನ್ನೇ ಮಾಡಿಸಿಕೊಂಡಿಲ್ಲ!

‘ಸರ್ಕಾರ ಬಿಳಿಜೋಳಕ್ಕೆ ಕ್ವಿಂಟಲ್‌ಗೆ ₹2,450 ದರ ನಿಗದಿ ಮಾಡಿದೆ. ಆದರೆ, ಮಾರುಕಟ್ಟೆಯಲ್ಲಿ ಇದಕ್ಕಿಂತಲೂ ಹೆಚ್ಚು ಬೆಲೆ ಇದೆ. ಕಲಬುರ್ಗಿ ಎಪಿಎಂಸಿಯಲ್ಲಿ ಬಿಳಿಜೋಳ ₹2,500ರಿಂದ ₹3,600 ವರೆಗೆ ಮಾರಾಟವಾಗುತ್ತಿದ್ದು, ಮಾದರಿ ದರ ₹3,300 ಇದೆ. ಹೀಗಾಗಿ ಬೆಂಬಲ ಬೆಲೆಯಡಿ ಮಾರಾಟ ಮಾಡಲು ನಾವು ಮುಂದಾಗುತ್ತಿಲ್ಲ’ ಎಂದು ರೈತರು ಹೇಳುತ್ತಿದ್ದಾರೆ.

‘ಬಿಳಿ ಜೋಳ ಹಾಗೂ ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸಲು ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಈ ವರೆಗೆ ಜಿಲ್ಲೆಯಲ್ಲಿ ಯಾವುದೇ ರೈತರು ನೋಂದಣಿ ಮಾಡಿಸಿಲ್ಲ’ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ತಿಳಿಸಿದ್ದಾರೆ.

‘ಬಿಳಿಜೋಳ ಮತ್ತು ರಾಗಿಯನ್ನು ಬೆಂಬಲ ಬೆಲೆಯಡಿ ಮಾರಾಟ ಮಾಡಲು ನೋಂದಣಿಗೆ ಜ.15ಕೊನೆ ದಿನವಾಗಿದೆ. ಜೋಳವನ್ನು ಪ್ರತಿ ರೈತರಿಂದ ಎಕರೆಗೆ 6 ಕ್ವಿಂಟಲ್‌ನಂತೆ ಮಾರ್ಚ್‌ 31ರ ವರೆಗೆ ಖರೀದಿಸಲಾಗುವುದು. ರೈತರು ಅಗತ್ಯ ದಾಖಲೆಗಳೊಂದಿಗೆ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

 

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !