ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶರ ನೇಮಕಾತಿ ಪೂರ್ವಭಾವಿ ಪರೀಕ್ಷೆ 8ಕ್ಕೆ

Last Updated 4 ಆಗಸ್ಟ್ 2021, 3:37 IST
ಅಕ್ಷರ ಗಾತ್ರ

ಕಲಬುರ್ಗಿ: ಸಿವಿಲ್ ನ್ಯಾಯಾಧೀಶರ ನೇಮಕಾತಿ ಪೂರ್ವಭಾವಿ ಪರೀಕ್ಷೆಯು ಆ. 8ರಂದು ಮಧ್ಯಾಹ್ನ 2.30ರಿಂದ ಸಂಜೆ 4.30 ಗಂಟೆಯವರೆಗೆ ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಪರೀಕ್ಷಾ ಕೋಣೆಗೆ ಪ್ರವೇಶಿಸುವ ಸಮಯದಲ್ಲಿ ಕೋವಿಡ್-19 ಲಸಿಕೆ ಪ್ರಮಾಣಪತ್ರ (ಸಾಫ್ಟ್ ಅಥವಾ ಹಾರ್ಡ್ ಕಾಪಿ) ಹಾಜರಪಡಿಸಬೇಕು.

ಕೋವಿಡ್ ಲಕ್ಷಣವಿರುವ ಹಾಗೂ ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳಿಗೆ ನಗರದ ಏಷಿಯನ್ ಮಾಲ್ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವನ್ನು ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಮೊದಲು ಹಾಗೂ ಪರೀಕ್ಷೆ ನಂತರ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಡಬಲ್ ಲೇಯೆರ್ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಹಾಗೂ ಕುಡಿಯುವ ನೀರಿನ ಬಾಟಲ್ ಸಹ ತೆಗೆದುಕೊಡು ಬರಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷೆ ದಿನದಂದು ಪರೀಕ್ಷಾ ಕೇಂದ್ರದ ಆವರಣದಲ್ಲಿ 2 ಗಂಟೆ ಮುಂಚಿತವಾಗಿ ಹಾಜರಿರಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT