ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ಕಾಂಗ್ರೆಸ್‌ಗೆ ಹೋಗುವುದಿಲ್ಲ: ಕೆ.ಎಸ್.ಈಶ್ವರಪ್ಪ

Last Updated 4 ಅಕ್ಟೋಬರ್ 2021, 6:25 IST
ಅಕ್ಷರ ಗಾತ್ರ

ಕಲಬುರ್ಗಿ: ಬಿಜೆಪಿಯ ಶಾಸಕರು ಸಿಂಹ ಇದ್ದ ಹಾಗೆ. ಅವರು ಮಾರಾಟದ ವಸ್ತುಗಳಲ್ಲ. ಹೀಗಾಗಿ ಕಾಂಗ್ರೆಸ್‌ಗೆ‌ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40 ಅಲ್ಲ, 4 ಜನ ಶಾಸಕರನ್ನು ಕಾಂಗ್ರೆಸ್ ಪಕ್ಷ ಸೆಳೆಯಲಿ ನೋಡೋಣ ಎಂದು ಸವಾಲು ಹಾಕಿದ ಅವರು, ಸಾಯುವ ಪಕ್ಷಕ್ಕೆ ಯಾರಾದರೂ ಹೋಗುತ್ತಾರೆಯೇ ಎಂದು ಪ್ರಶ್ನಿಸಿದರು.

ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಒಡೆದುಹೋಗಿದೆ. ಇಡೀ ದೇಶದಲ್ಲಿ ಪಕ್ಷ ತುಕಡಿಯಾಗಿದೆ. ಆ ಪಕ್ಷ ಮೊದಲು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡಲಿ. ಕಾಂಗ್ರೆಸ್ ಈ ಹಿಂದೆ ಮಾಡಿದ ಕೆಲಸಗಳ ಬಗ್ಗೆ ಪಟ್ಟಿ ಕೊಡಲಿ, ನಂತರ ನಾವು ಕೊಡುತ್ತೇವೆ. ಅನೇಕ ರಾಷ್ಟ್ರಗಳ‌ ಮುಸ್ಲಿಮರು ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಲ ಮಾಡಿ ತುಪ್ಪ ತಿನ್ನುವ ಚಾಳಿ ಇದೆ. ಹಾಗಾಗಿ ದೇಶದ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ' ಎಂಬ ಮಲ್ಲಿಕಾರ್ಜುನ ‌ಖರ್ಗೆ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ ಅವರು, ಖರ್ಗೆ ಅವರು ಹಿರಿಯರಿದ್ದು, ಪ್ರಧಾನಿ ಅವರ ಬಗ್ಗೆ ಲಘುವಾಗಿ ಮಾತಾಡಬಾರದು. ಮೋದಿ ದೇಶದ ಆಸ್ತಿಗಳನ್ನು ಮಾರಾಟ ಮಾಡುತ್ತಿಲ್ಲ. ಅವರೇ ದೇಶದ ಆಸ್ತಿಯಾಗಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT