ಗುರುವಾರ , ಸೆಪ್ಟೆಂಬರ್ 23, 2021
27 °C

ಉಕ್ಕಿ ಹರಿದ ಕಾಗಿಣಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಡಿ: ಸತತ ಮಳೆಯಿಂದ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಇಂಗಳಗಿ– ಶಹಬಾದ್ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಬುಧವಾರ ನೀರಿನ ಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಇದರಿಂದ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಹಲಕರ್ಟಿ ಗ್ರಾಮಕ್ಕೆ ಹೊಂದಿಕೊಂಡು ಸಾಗುವ ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಹಲಕರ್ಟಿ, ಕೊಂಚೂರು, ಬಳವಡ್ಗಿ, ಕಡಬೂರು ಗ್ರಾಮಗಳಿಗೆ ನೀರು ಹೊಕ್ಕಿದೆ.

ಗ್ರಾಮಗಳ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ದವಸ ಧಾನ್ಯಗಳು ಹಾಳಾಗಿವೆ. ಹಲಕರ್ಟಿ-ದೇವಾಪೂರ, ವಾಡಿ-ಕೊಂಚೂರು, ವಾಡಿ-ಬಳವಡ್ಗಿ, ಹಾಗೂ ಕಡಬೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ಜನರು ಪರದಾಡಿದರು.

ಹೊಲಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದರಿಂದ ತೊಗರಿ ಹಾಗೂ ಹತ್ತಿ ಬೆಳೆಗಳು ನೀರಲ್ಲಿ ನಿಂತಿದ್ದು, ರೈತರ ಚಿಂತೆಗೆ ಕಾರಣವಾಗಿದೆ. ಅಲ್ಲಲ್ಲಿ ತಗ್ಗುಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆರೆಗಳಂತೆ ಭಾಸವಾಗುತ್ತಿದೆ. ಮಧ್ಯಾಹ್ನ ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಬಳವಡ್ಗಿ ಗ್ರಾಮಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರು ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಪಂಚಾಯತಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು