ಕಲಬುರಗಿ: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾ ಘಟಕದ ಉದ್ಘಾಟನೆ ಅಂಗವಾಗಿ ಇದೇ 29ರಂದು ಬೆಳಿಗ್ಗೆ 11ಕ್ಕೆ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ 105 ಮಂದಿ ಸರ್ಕಾರಿ ನೌಕರರಿಗೆ ಸಾರ್ಥಕ ಸೇವಾ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಣುಕಾ ಡಾಂಗೆ ತಿಳಿಸಿದರು.

‘ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ನೂತನ ಪದಾಧಿಕಾರಿಗಳ ಪದಗ್ರಹಣವೂ ಜರುಗಲಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ ಭಾಗವಹಿಸಲಿದ್ದಾರೆ. ಕವನ ಸಂಕಲನವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಜನಾರ್ಪಣೆ ಮಾಡುವರು. ಸಾನ್ನಿಧ್ಯವನ್ನು ಅಫಜಲಪುರದ ಮಳೇಂದ್ರ ಶಿವಾಚಾರ್ಯರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್. ಅಪ್ಪಾ ವಹಿಸಲಿದ್ದಾರೆ. ಮಹಿಳಾ ನೌಕರರ ಸಂಘದ ರಾಜ್ಯ ಅಧ್ಯಕ್ಷೆ ರೋಷನಿಗೌಡ ಅಧ್ಯಕ್ಷತೆ ವಹಿಸುವರು’ ಎಂದರು.

ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ನೌಕರರ ಸಂಘದ ಅಧ್ಯಕ್ಷರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಘಟನೆಯ ಪದಾಧಿಕಾರಿಗಳಾದ ಅರುಂಧತಿ ಕೆ., ರಜನಿ ಪಾಟೀಲ, ಶಿವಲೀಲಾ, ಶೋಭಾವತಿ ಗಾರಂಪಳ್ಳಿ, ಶಬೇರಾ ನದಾಫ ಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-34-657754439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.