ಕಲಬುರಗಿ: ಆದಿ ಬಣಜಿಗ ಸಮಾಜಕ್ಕೆ ನಗರದ ಹೊರವಲಯದ ಶರಣ ಶಿರಸಗಿ ಸರ್ವೆ ನಂಬರ್ 243ರಲ್ಲಿ 4 ಎಕರೆ ಭೂಮಿಯನ್ನು ಮಂಜೂರು ಮಾಡಿದ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಜಿಲ್ಲಾ ಆದಿ ಬಣಜಿಗ ಸಂಘದ ಗೌರವಾಧ್ಯಕ್ಷ ಬಸವರಾಜ ಕೊನೇಕ್, ಅಧ್ಯಕ್ಷ ಶಿವಪುತ್ರಪ್ಪ ಬುರುಡೆ, ಕಾರ್ಯದರ್ಶಿ ರಾಜೇಂದ್ರ ಕರೇಕಲ್ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಶೇಷ ಆಸಕ್ತಿಯಿಂದ ಇದು ಸಾಧ್ಯವಾಗಿದೆ. ಸರ್ಕಾರ ಮಂಜೂರು ಮಾಡಿದ ಭೂಮಿಯಲ್ಲಿ ವಿದ್ಯಾರ್ಥಿ ನಿಲಯ, ಕಲ್ಯಾಣ ಮಂಟಪ ಸೇರಿದಂತೆ ಸಮಾಜಕ್ಕೆ ನೆರವಾಗುವ ಕೆಲಸಗಳನ್ನು ಮಾಡಲಾ ಗುವುದು. ಇದಕ್ಕಾಗಿ ಸಮಾಜದ ಗಣ್ಯರು ಉದಾರವಾಗಿ ಆರ್ಥಿಕ ನೆರವು ನೀಡುತ್ತಿ ದ್ದಾರೆ ಎಂದು ಕೊನೇಕ್ ಹೇಳಿದ್ದಾರೆ.

ಆದಿ ಬಣಜಿಗ ಸಮಾಜಕ್ಕೆ ಭೂಮಿ ನೀಡಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಮುಖಂಡ ಲಿಂಗರಾಜ ಕಣ್ಣಿ ಸ್ವಾಗತಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-34-2050528668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.