ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮೋದ‌ ಮುತಾಲಿಕ್, ಚೈತ್ರಾ ಕುಂದಾಪುರ ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

Last Updated 26 ಫೆಬ್ರುವರಿ 2022, 13:21 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ 27ರಿಂದ ಮಾರ್ಚ್‌ 3ರವರೆಗೆ ಶ್ರೀರಾಮ ಸೇನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ‌ ಮುತಾಲಿಕ್, ಕುಂದಾಪುರದ‌ ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ‌ ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ.

ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾದ ಸಿದ್ದಲಿಂಗ ಸ್ವಾಮೀಜಿಗೆ ಫೆ 27ರಿಂದ ಮಾ 3ರವರೆಗೆ ಆಳಂದ ತಾಲ್ಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಆಳಂದ ಪಟ್ಟಣದ ಲಾಡ್ಲೆ‌ ಮಶಾಕ್ ದರ್ಗಾದಲ್ಲಿ‌ ಮಾರ್ಚ್ 1ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ‌ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಸಿದ್ದಲಿಂಗ‌ ಸ್ವಾಮೀಜಿ ಕರೆ ನೀಡಿದ್ದಲ್ಲದೆ ಫೆ.27ಕ್ಕೆ ಆಳಂದ‌ ಚಲೋ ಕಾರ್ಯಕ್ರಮಕ್ಕೆ ಕರೆ‌ ನೀಡಿದ್ದರು. ಆದ್ದರಿಂದ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ‍ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರು ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದರು. ಈ ವರದಿ ಆಧರಿಸಿ ಪ್ರಮೋದ‌ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ಮತ್ತು ಸಿದ್ದಲಿಂಗ ಸ್ವಾಮೀಜಿ ಆಳಂದ ತಾಲ್ಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT