ಕಲಬುರಗಿ: ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ವಕೀಲ ಹುಲಿಗೆಪ್ಪ ಕನಕಗಿರಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಗುಲಬರ್ಗಾ ವಕೀಲರ ಸಂಘ ಆಗ್ರಹಿಸಿದೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ವಿ. ಪಸಾರ, ‘ಹುಲಿಗೆಪ್ಪ ಅವರು ಜಿಲ್ಲೆಯಲ್ಲಿ ಹೈಕೋರ್ಟ್, ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ, ಕರ್ನಾಟಕ ಗ್ರಾಹಕ ವ್ಯಾಜ್ಯಗಳ ನ್ಯಾಯಾಲಯ ಪೀಠಗಳನ್ನು ಸ್ಥಾಪಿಸುವ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ವಕೀಲರಿಗಾಗಿ ಕ್ರೀಡಾಕೂಟ, ಕುಂದುಕೊರತೆ ನಿವಾರಣೆ ಮತ್ತು ಸರ್ಕಾರದ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದರು.

‘ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವಲ್ಲಿ ವಕೀಲರ ಸಂಘ ಮತ್ತು ಸರ್ಕಾರದ ನಡುವೆ ನಿರಂತರ ಸಂಪರ್ಕವನ್ನು ಸಾಧಿಸಿದ್ದರು. ಕಾಂಗ್ರೆಸ್ ಹೈಕಮಾಂಡ್ ಹುಲಿಗೆಪ್ಪ ಅವರನ್ನು ಎಂಎಲ್ಸಿ ಮಾಡಿದರೆ, ವಕೀಲರ ಮತ್ತು ಸಮಾಜದ ಪ್ರಗತಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದು ಹೇಳಿದರು.

ಗುಲಬರ್ಗಾ ವಕೀಲರ ಸಂಘ ಹೈಕೋರ್ಟ್ ಘಟಕದ ಪ್ರಧಾನ ಕಾರ್ಯದರ್ಶಿ ಗೌರೀಶ ಕಾಶೆಂಪುರ ಮಾತನಾಡಿ, ‘ಹಣಬಲದ ಇಂದಿನ ಪರಿಸ್ಥಿತಿಯಲ್ಲಿ ವಕೀಲರು ನೇರವಾಗಿ ಸ್ಪರ್ಧಿಸಿ ಗೆಲ್ಲಲು ಸಾಧ್ಯವಿಲ್ಲ. ಹಾಗಾಗಿ, ಎಂಎಲ್ಸಿ ಆಗಲು ಮುಂದೆ ಬರುವ ವಕೀಲರಿಗೆ ನಮ್ಮ ಸಂಘ ಬೆಂಬಲ ನೀಡಲಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷವಿರಲಿ ವಕೀಲರಿಗೆ ಪ್ರಾತಿನಿಧ್ಯ ನೀಡಬೇಕು. ಈ ಕುರಿತು ಪಕ್ಷಗಳ ಅಧ್ಯಕ್ಷರಿಗೆ ಪತ್ರ ಬರೆಯಲಾಗುವುದು’ ಎಂದರು.

ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ ಎಲ್.ಪೂಜಾರಿ, ಮಂಜುನಾಥ ಜಿ.ಪಾಟೀಲ, ಸಿದ್ದರಾಮ ಬಿ.ವಾಡಿ, ಮಂಜುನಾಥ ಗಿನ್ನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-34-715148041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.