ಕಲಬುರಗಿ: ಜಿಲ್ಲೆಯ ಜೇವರ್ಗಿ, ಯಡ್ರಾಮಿ, ಚಿತ್ತಾಪುರ ಹಾಗೂ ಸೇಡಂ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರ ಅಂಗಡಿಗಳ ಮೇಲೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ನೇತೃತ್ವದಲ್ಲಿ ಅಧಿಕಾರಿಗಳ ತಂಡದಿಂದ ಅನಿರೀಕ್ಷಿತ ದಾಳಿ ನಡೆಸಿದ್ದು, ನಿಯಮ ಉಲ್ಲಂಘಿಸಿದ 26 ಮಳಿಗೆಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಜೇವರ್ಗಿ ತಾಲ್ಲೂಕಿನಲ್ಲಿ ಒಟ್ಟು 12 ಮಳಿಗೆಗಳನ್ನು ಪರಿಶೀಲಿಸಿದ್ದು, 10 ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. ಸೇಡಂ–5, ಯಡ್ರಾಮಿ–5 ಮತ್ತು ಚಿತ್ತಾಪುರ ತಾಲ್ಲೂಕಿನಲ್ಲಿ 6 ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್ ಕೊಡಲಾಗಿದೆ.

‘ಜೇವರ್ಗಿ ತಾಲ್ಲೂಕಿನ 10 ಮಳಿಗೆಗಳಲ್ಲಿ ಸೂಕ್ತ ದಾಖಲೆಗಳು ಇಲ್ಲದ ಕಾರಣ ₹45.75 ಲಕ್ಷ ಮೌಲ್ಯದ 192.4 ಟನ್ ಹತ್ತಿ ಬೀಜ ಮತ್ತು ರಸಗೊಬ್ಬರದ ಮಾರಾಟಕ್ಕೆ ತಡೆ ಆದೇಶ ನೀಡಲಾಗಿದೆ’ ಎಂದು ಸಮದ್ ಪಟೇಲ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೃಷಿ ಪರಿಕರ ಮಳಿಗೆಗಳಲ್ಲಿ ಕೆ–ಕಿಸಾನ್ ತಂತ್ರಾಂಶದಲ್ಲಿ ರಸಗೊಬ್ಬರ ವಿತರಿಸುತ್ತಿರುವ ಕುರಿತು, ರಸಗೊಬ್ಬರದ ದಾಸ್ತಾನಿನ ವಿವರ ಹಾಗೂ ಪಿಒಎಸ್ ದಾಸ್ತಾನನ್ನು ಪರಿಶೀಲಿಸಲಾಗಿದೆ. ಮಾರ್ಕೆಟ್ನಲ್ಲಿರುವ ಗೋದಾಮುಗಳಿಗೆ ಭೇಟಿ ನೀಡಿ ರಸಗೊಬ್ಬರ ನಿಯಂತ್ರಣ ಆದೇಶ-1985 ಉಲ್ಲಂಘಿಸಿದ ಮಾರಾಟಗಾರರಿಗೆ ನೋಟಿಸ್ ನೀಡಲಾಗಿದ್ದು, ಅವರ ಮಾರಾಟ ಪರವಾನಗಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.

‘ರೈತರಿಗೆ ರಸಗೊಬ್ಬರ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೆಚ್ಚಿನ ಹಣ ವಸೂಲಿ ಮಾಡುವವರ ವಿರುದ್ಧ ರಸಗೊಬ್ಬರ ನಿಯಂತ್ರಣ ಆದೇಶದ ಪ್ರಕಾರ ಹಾಗೂ ಅವಶ್ಯಕ ವಸ್ತುಗಳ ಕಾಯ್ದೆಗಳ ಅನುಸಾರ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಕಲಬುರಗಿ ಉಪ ಕೃಷಿ ನಿರ್ದೇಶಕ ಬಾಲರಾಜ್ ಗಂಗರಾವ್, ಸೇಡಂ ಉಪ ಕೃಷಿ ನಿರ್ದೇಶಕಿ ಅನಸೂಯಾ ಹೂಗಾರ ಸೇರಿದಂತೆ ಜಾರಿದಳ, ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ಅಧಿಕಾರಿಗಳು ತಂಡದಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-1334509208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.