ಕಲಬುರಗಿ: ‘ಆಳಂದ ತಾಲ್ಲೂಕಿನ ರಸ್ತೆಗಳ ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಮಾರ್ಚ್ 23ರಿಂದ ಆಳಂದದ ಪ್ರವಾಸಿ ಮಂದಿರದಲ್ಲಿ ಧರಣಿ ಆರಂಭಿಸಿದರೂ ಈವರೆಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸುವ ಕೆಲಸ ಮಾಡಿಲ್ಲ’ ಎಂದು ಅಖಿಲ ಭಾರತ್ ಕಿಸಾನ ಸಭಾ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡ್ಯಾಳ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏ.11ರಂದು ಚಿತ್ತಾಪುರಕ್ಕೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮನವಿಪತ್ರ ಸಲ್ಲಿಸಲಾಗುವುದು. ಮುಂದೆ ನಿರ್ಲಕ್ಷ್ಯ ಮುಂದುವರಿದರೆ ರಸ್ತೆ ತಡೆ ಹಾಗೂ ಉಗ್ರವಾದ ಪ್ರತಿಭಟನೆ ಮಾಡಲಾಗುವುದು’ ಎಂದರು.

‘ಆಳಂದ ತಾಲ್ಲೂಕಿನ ತಡೋಳ ಗ್ರಾಮದಲ್ಲಿ ಅಂತರ್ಜಲ ಹೆಚ್ಚಳ ಮಾಡಲು ಸುಮಾರು ₹12 ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿದೆ. ಅದರಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ ಔರಾದ್–ಸದಾಶಿವಘಡ ರಸ್ತೆಗಳನ್ನು ಅಗಲೀಕರಣ ಮಾಡಬೇಕು. ಕುಲಾಲಿ ರೈಲ್ವೆ ಸೇತುವೆ ನಿರ್ಮಾಣ ಮಾಡಬೇಕು’ ಎಂದು ಒತ್ತಾಯಿಸಿದರು.

ಅಖಿಲ ಭಾರತ್ ಕಿಸಾನ ಸಭಾ ರಾಜ್ಯ ಕಾರ್ಯಧ್ಯಕ್ಷ ಮೌಲಾ ಮುಲ್ಲಾ, ಆಳಂದ ತಾಲ್ಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಜೀದ್ ಅಹ್ಮದ್ ದಿಗ್ಗಾವಕರ್ ಹಾಗೂ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-34-781436651

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.