ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಅಮರ್ಜಾ ಅಣೆಕಟ್ಟೆಯಿಂದ ಕೆಳಗಡೆ ನಾಲಾಕ್ಕೆ ನೀರು ಬಿಡುವಂತೆ ಒತ್ತಾಯಿಸಿ ನವ ಕರ್ನಾಟಕ ರೈತ ಸಂಘದ ವತಿಯಿಂದ ಈಚೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ಈ ಕುರಿತು ಪ್ರಾದೇಶಿಕ ಆಯುಕ್ತರಿಗೆ ಮನವಿಪತ್ರ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ‘ಅಮರ್ಜಾ ಅಣೆಕಟ್ಟೆ ಕೆಳಭಾಗದ ಕೊರಳ್ಳಿ, ಭೂಸನೂರು, ನಿಂಬರ್ಗಾ, ದೇವಂತಗಿ, ದಂಗಾಪುರ, ಜವಳಿ (ಡಿ), ಬಟ್ಟರಗಾ, ಹಿತ್ತಲಶಿರೂರು ಹಾಗೂ ಕುಡಕಿ ಗ್ರಾಮಗಳಲ್ಲಿ ದನಕರು ಮತ್ತು ಕುರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಪ್ರಸ್ತುತ ಕೆನಾಲ್ಗೆ ನೀರು ಬಿಡುವುದನ್ನು ನಿಲ್ಲಿಸಿ, ಕೆಳಗಡೆ ನಾಲಾಕ್ಕೆ ಹರಿಸಿದರೆ ದನ–ಕರು, ಕುರಿಗಳಿಗೆ ನೀರು ಕುಡಿಯಲು ಮತ್ತು ರೈತರ ಬೋರ್ವೆಲ್ ಹಾಗೂ ಬಾವಿಗಳಿಗೆ ಅನುಕೂಲವಾಗುತ್ತದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಲಕ್ಷ್ಮಿಪುತ್ರ ಶೇಗಜಿ, ಸಂಜಯ ಆರ್.ಕೆ., ಪಂಡಿತ್ ಪೂಜಾರಿ, ಶಿವಾಜಿ, ಭೀಮಶಾ, ದುರ್ಗಪ್ಪಾ, ಪ್ರಕಾಶ ಸುತಾರ, ಮಂಜುನಾಥ ಧುತ್ತರಗಾಂವ, ಶ್ರೀಮಂತರಾವ ಪಾಟೀಲ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-34-1503872334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.