ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ‘ನಮ್ಮ ಭೀಮ ಅಭಿಮಾನದ ಅಂಬೇಡ್ಕರೋತ್ಸವ’ ಎಂಬ ಕಾರ್ಯಕ್ರಮವನ್ನು ಏ.11ರಂದು ಬೆಳಿಗ್ಗೆ 10.45ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ವಕೀಲ ಜಗನ್ನಾಥ ತರನಳ್ಳಿ ಅಧ್ಯಕ್ಷತೆಯಲ್ಲಿ ‘ಸಮತೆಯ ಕಣ್ಣು’ ವಿಶೇಷ ಕವಿಗೋಷ್ಠಿ ನಡೆಯಲಿದ್ದು, ಪಾಲಿಕೆ ಸದಸ್ಯ ವಿಶಾಲ ನವರಂಗ, ಆದರ್ಶ ಶಿಕ್ಷಕಿ ಗೀತಾ ಭರಣಿ ಉಪಸ್ಥಿತರಿರುವರು.

ಜಿಲ್ಲೆಯ 18 ಜನ ಸಮತಾಪ್ರಿಯರಿಗೆ ಭೀಮ ಪ್ರಿಯ ಗೌರವ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಮಂಡಳಿಯ ನೂತನ ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-34-1110105623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.