ಕಲಬುರಗಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕ ಆಯ್ಕೆ ಸಮಿತಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಅರುಣ ಜೋಳದಕೂಡ್ಲಿಗಿ ಅವರನ್ನು ನೇಮಕ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ.

ಅರುಣ ಅವರನ್ನು ಕಲಬುರಗಿ ಕಂದಾಯ ವಿಭಾಗದಿಂದ ಸದಸ್ಯ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ನೂತನ ಆಯ್ಕೆ ಸಮಿತಿಯು ಎರಡು ವರ್ಷ ಅಥವಾ ಮುಂದಿನ ಸಮಿತಿ ಅಸ್ತಿತ್ವಕ್ಕೆ ಬರುವವರೆಗೆ ಇರಲಿದೆ ಎಂದು ತಿಳಿಸಲಾಗಿದೆ.

ಜಾನಪದ ತಜ್ಞರಾಗಿರುವ ಅರುಣ ಜೋಳದಕೂಡ್ಲಿಗಿ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಸಂಪುಟಗಳ ವಿವಿಧ ಭಾಗಗಳನ್ನು ಸಮಾಜದ ವಿವಿಧ ಸ್ತರದ ಜನರಿಂದ ಓದಿಸಿ ‘ಅಂಬೇಡ್ಕರ್ ಓದು’ ಯೂಟ್ಯೂಬ್ನಲ್ಲಿ ಆಡಿಯೊ ಸರಣಿಯನ್ನು ರೂಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-34-428387999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.