ಕಲಬುರಗಿ: ‘ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಅಂಗವಾಗಿ ಏ.4 ಮತ್ತು ಏ.5ರಂದು ಎರಡು ದಿನಗಳ ಕಾಲ ಜಿಲ್ಲಾ ಜಯಂತ್ಯುತ್ಸವ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ದೊಡ್ಡಮನಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏ.4ರಂದು ಸಂಜೆ 4 ಗಂಟೆಗೆ ಬಾಬು ಜಗಜೀವನರಾಮ್ ಪ್ರತಿಮೆ ಎದುರು ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ಸನ್ಮಾನ ಜರುಗಲಿದೆ. ಜಿಲ್ಲೆಯ ಸಚಿವರು, ಶಾಸಕರು, ಸಮಾಜದ ಮುಖಂಡರು, ಗಣ್ಯರು ಭಾಗವಹಿಸಲಿದ್ದಾರೆ’ ಎಂದರು.

‘ಏ.5ರಂದು ಸಂಜೆ 5 ಗಂಟೆಗೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಬಾಬು ಜಗಜೀವನರಾಮ್ ಪ್ರತಿಮೆವರೆಗೆ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸಮಾಜದ ಜನರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಸತೀಶ ಅಳ್ಳೋಳ್ಳಿ, ಪರಮೇಶ್ವರ ಖಾನಾಪುರ, ಶಾಮ ನಾಟಿಕಾರ, ರಾಜು ವಾಡೇಕರ್, ಭೀಮಣ್ಣ ಬಿಲ್ಲವ, ಬಾಬು ಸುಂಠಾಣ, ವಿಜಯಕುಮಾರ ಕೌಡ್ಯಾಳ, ಲಿಂಗರಾಜ ತಾರಫೈಲ್, ಗೋಪಾಲರಾವ್ ಕಟ್ಟಿಮನಿ, ನಾಗರಾಜ ಗುಂಡಗುರ್ತಿ, ರಮೇಶ ವಾಡೇಕರ್ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-34-1779446038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.