ಕಲಬುರಗಿ: ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಬ್ಯಾಕ್ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿರುವುದು ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಹೇಶ ಹುಬ್ಬಳ್ಳಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಸಮಾವೇಶದಲ್ಲಿ ಅಂಗೀಕರಿಸಲಾದ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಂಘದ ನಿರಂತರ ಹೋರಾಟ ಮತ್ತು ಮನವಿಗಳಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಮೇ 25ರಂದು ಎಲ್ಲಾ ಇಲಾಖೆಗಳಲ್ಲಿನ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಮೂಲಕ ಆದೇಶ ಹೊರಡಿಸಿರುವುದು ಸಂತಸ ತಂದಿದೆ. ಈ ಮೂಲಕ ಸರ್ಕಾರ ಸಾಮಾಜಿಕ ನ್ಯಾಯದತ್ತ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಈ ಬೇಡಿಕೆಗಳ ಸಂಪೂರ್ಣ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳಿಗಾಗಿ ಸಂಘದ ಹೋರಾಟ ಮುಂದುವರಿಯಲಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-1332117541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.