ಕಲಬುರಗಿ: ‘ಬಸವಣ್ಣನವರ ಜಯಂತಿಯನ್ನು ಎಲ್ಲ ಸಂಘಟನೆಗಳನ್ನು ಒಳಗೊಂಡು ಆಚರಿಸುತ್ತಿದ್ದು, ದೇಣಿಗೆ ಸಂಗ್ರಹಿಸದೇ ಅರ್ಥಪೂರ್ಣ ಆಚರಣೆಗೆ ಎಲ್ಲರೂ ಕೈಜೋಡಿಸಬೇಕು’ ಎಂದು ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರೂ ಆದ ಶಾಸಕ ಬಿ.ಆರ್.ಪಾಟೀಲ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಸಮಾಜದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸಿ ಭಾನುವಾರ ಹಮ್ಮಿಕೊಂಡ ಬಸವಾಭಿಮಾನಿಗಳ ಸಮಾವೇಶ, ಸೋಮವಾರ ನಡೆಯಲಿರುವ ಬಸವ ಜಯಂತಿ, ಮೆರವಣಿಗೆ ಯಶಸ್ವಿಗೊಳಿಸಬೇಕು’ ಎಂದು ಹೇಳಿದರು.

ಬಸವ ಜಯಂತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ ಮಾತನಾಡಿ, ‘ದೇಣಿಗೆ ರಹಿತ, ಸಮಾಜದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಜಯಂತಿ ಆಚರಿಸುತ್ತಿದ್ದು, ಎಲ್ಲರೂ ತನು, ಮನದಿಂದ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎರಡು ದಿನ ಹಂಚಲು ಮುದ್ರಿಸಿರುವ ಬಸವಣ್ಣನವರ ವಚನಗಳ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕರಾದ ಅಮರನಾಥ ಪಾಟೀಲ, ದತ್ತಾತ್ರೇಯ ಪಾಟೀಲ ರೇವೂರ, ಪ್ರಮುಖರಾದ ಚಂದು ಪಾಟೀಲ, ಶರಣು ಮೋದಿ, ಅರುಣಕುಮಾರ ಪಾಟೀಲ, ಆರ್.ಜಿ.ಶೆಟಗಾರ, ಶಿವಕಾಂತ ಮಹಾಜನ, ಸುಭಾಷ ಬಿಜಾಪುರೆ, ಸೋಮಶೇಖರ ಗೋನಾಯಕ, ರಾಜಾ ಭೀಮಳ್ಳಿ, ಸಂಗಮೇಶ ನಾಗನಳ್ಳಿ ಸೇರಿದಂತೆ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-34-853971554

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.