ಕಲಬುರಗಿ: ‘ಬಸವಣ್ಣನವರ ವಿಚಾರಗಳನ್ನು ಮನೆ–ಮನಗಳಿಗೆ ತಲುಪಿಸಲು ಪರಿವರ್ತನಾ ಪ್ರತಿಷ್ಠಾನವು ವಿಶ್ವ ಸಾಮರಸ್ಯ ವೇದಿಕೆಯ ಸಹಯೋಗದಲ್ಲಿ ಭಾನುವಾರ (ಮೇ 17) ನಗರದಲ್ಲಿ ಆಯೋಜಿಸಿರುವ ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ದಲಿತ ಸೇನೆ ಎಲ್ಲ ರೀತಿಯ ಸಹಕಾರ ನೀಡಲಿದೆ’ ಎಂದು ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸ್ತುತ ಕೆಲವರು ಬಸವಣ್ಣವರ ವಿಚಾರಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದ ಬಸವಣ್ಣನವರ ವಿಚಾರಗಳನ್ನು ಸಮಾಜದ ಎಲ್ಲರಿಗೂ ತಲುಪಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ಇಂಥ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಆದ್ದರಿಂದ ಈ ಕಾರ್ಯಕ್ರಮಕ್ಕೆ ನಮ್ಮ ಸಂಘಟನೆಯು ಎಲ್ಲ ರೀತಿಯ ಸಹಕಾರ ನೀಡಲಿದೆ’ ಎಂದರು.

‘ಪ್ರಗತಿಪರ ಮಠಾಧೀಶರು, ಚಿಂತಕರು ಭಾಗವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದರು. ಶಿವಲಿಂಗಪ್ಪ, ಕಪಿಲ್, ಸುನೀಲ್, ಶಿವಕುಮಾರ, ಜಗನ್ನಾಥ, ವಸಂತ, ಚಂದ್ರಕಾಂತ , ಭಾಗೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-34-19322681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.