ಕಲಬುರಗಿ: ‘ಪರಿವರ್ತನಾ ಪ್ರತಿಷ್ಠಾನ ಹಾಗೂ ವಿಶ್ವ ಸಾಮರಸ್ಯ ವೇದಿಕೆಯಿಂದ ನಗರದ ಡಾ.ಎಸ್.ಎಂ.ಪಂಡಿತ್ ರಂಗ ಮಂದಿರದಲ್ಲಿ ಮೇ 17ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಪರಿವರ್ತನಾ ಪ್ರತಿಷ್ಠಾನದ ಅಧ್ಯಕ್ಷ ಅರ್ಜುನ ಹತ್ತಿ ಹೇಳಿದರು.

‘ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಸವಣ್ಣ ಆದಿಯಾಗಿ ಎಲ್ಲ ಮಹನೀಯರು, ಶರಣರನ್ನು, ಗುರುಗಳನ್ನು ಇಂದು ಜಾತಿಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇಂದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಎಲ್ಲ ಜಾತಿಯ ಶರಣರನ್ನು ಸೇರಿ ಶರಣರ ಮಹಾಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೋಷಿತ, ದಲಿತ, ಮುಂದುವರಿದ ಸಮಾಜಗಳೂ ಸೇರಿದಂತೆ ಎಲ್ಲ ಸಮಾಜದ ಜನರು ಕಲ್ಯಾಣ ಕ್ರಾಂತಿಗೈದ ಬಸವಣ್ಣನವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳ ಬೇಕು’ ಎಂದು ಕೋರಿದರು.

ಪ್ರತಿಷ್ಠಾನದ ನಿರ್ದೇಶಕ ಚಂದ್ರಕಾಂತ ತಳವಾರ ಮಾತನಾಡಿ, ‘ಬೀದರ್ ಸಿದ್ಧರಾಮ ಬೆಲ್ದಾಳ ಶರಣರು ಹಾಗೂ ತೊನಸನಹಳ್ಳಿಯ ಮಲ್ಲಣ್ಣಪ್ಪ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಹೊಸದುರ್ಗದ ಕಾಗಿನೆಲೆ ಕನಕಗುರುಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ಉದ್ಘಾಟಿಸುವರು. ಅರ್ಜುನ ಹತ್ತಿ ಅಧ್ಯಕ್ಷತೆ ವಹಿಸುವರು. ದಾವಣಗೆರೆಯ ಸಹಾಯಕ ಪ್ರಾಧ್ಯಾಪಕ ವಿಶ್ವನಾಥ ಪಿ. ವಿಶೇಷ ಉಪನ್ಯಾಸ ನೀಡುವರು’ ಎಂದು ವಿವರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮುಖಂಡ ಶಿವಾನಂದ ಹೂಗಾರ, ಸಂತೋಷಕುಮಾರ ಕಟಕೆ, ಗಂಗಾರಾಮ ಗಾಯಕವಾಡ, ರಾಹುಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-34-1613911301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.