ಕಲಬುರಗಿ: ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ 2006-07, 2007-08 ಮತ್ತು 2008-09ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆದು, ಪ್ರಸ್ತುತ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ (ಮೆಚ್ಯುರಿಟಿ) ಮೊತ್ತ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಾನುಭವಿಗೆ 18 ವರ್ಷ ಪೂರ್ಣಗೊಂಡ ದಿನದಿಂದ 3 ವರ್ಷಗಳ ಒಳಗಾಗಿ ಕಚೇರಿಯಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಒಂದು ವೇಳೆ 3 ವರ್ಷದ ಒಳಗೆ ಫಲಾನುಭವಿಗಳು ಅರ್ಜಿ ಸಲ್ಲಿಸದಿದ್ದರೆ, ಪರಿಪಕ್ವದ ಮೊತ್ತವನ್ನು ಸರ್ಕಾರಕ್ಕೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರಗಳು, ಕಲಬುರಗಿ ನಗರದ ಎಚ್.ಸಿ.ಜಿ. ಆಸ್ಪತ್ರೆ ಹತ್ತಿರ, ಲಾಹೋಟಿ ಪೆಟ್ರೊಲ್ ಪಂಪ್ ಎದುರು, ಖೂಬಾ ಬಡಾವಣೆಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸಲು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-34-364840645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.