ಕಲಬುರಗಿ: ‘ಕುಡಿಯುವ ಉದ್ದೇಶಕ್ಕಾಗಿ ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ ಮೂಲಕ ಭೀಮಾ ನದಿಗೆ 2 ಟಿಎಂಸಿ ಅಡಿ ನೀರು ಹರಿಸಬೇಕು’ ಎಂದು ಶಾಸಕರೂ ಆದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಒತ್ತಾಯಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭೀಮಾ ನದಿಯ ಒಡಲು ಬರಿದಾಗಿದೆ. ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದರೆ ಅಲ್ಲಿ ಬೇರೆ ಪಕ್ಷದ ಸರ್ಕಾರ ಇದೆ’ ಎಂದರು.

‘ಆಳಂದ ಕ್ಷೇತ್ರದಲ್ಲಿ 24 ಕಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಕೊಳವೆಬಾವಿ ಮಾಲೀಕರಿಗೆ ವರ್ಷಕ್ಕೆ ತಲಾ ₹25 ಸಾವಿರ ನೀಡಲಾಗುತ್ತಿದೆ. ಆಳಂದ ಕ್ಷೇತ್ರ ವ್ಯಾಪ್ತಿಯ 32 ಪಂಚಾಯಿತಿಗಳ ಪೈಕಿ 3–4 ಪಂಚಾಯಿತಿಗಳಲ್ಲಿ ಮಾತ್ರ ಸ್ವಲ್ಪ ಹಣವಿದೆ. ಪಿಡಿಒಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದರು.

‘ಅಂತರ್ಜಲಮಟ್ಟ ಕುಸಿಯುತ್ತಿದೆ. ಅದರ ಸಂರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಊರಿಗೊಂದು ಕೆರೆ ಆಗಬೇಕು. ಅದಕ್ಕಾಗಿ ಕನಿಷ್ಠ ₹100 ಕೋಟಿ ನೀಡುವಂತೆ ಕೇಳಿದ್ದೇವೆ’ ಎಂದು ಹೇಳಿದರು.

‘ಜೆಜೆಎಂ ಕಾಮಗಾರಿ ಹಳ್ಳ ಹಿಡಿದಿದೆ. ಲೂಟಿ ಹೊಡೆಯುವುದಕ್ಕಾಗಿಯೇ ಈ ಯೋಜನೆ ಇದೆ. ಹಳ್ಳಿಗಳಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಅಗೆದು ಹಾಗೆಯೇ ಬಿಡಲಾಗಿದೆ. ವೃದ್ಧರು, ಮಕ್ಕಳು, ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರದಿಂದ ಜೆಜೆಎಂ ಕಾಮಗಾರಿಗೆ ಹಣ ನೀಡುತ್ತಿಲ್ಲ’ ಎಂದು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-34-1249055537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.