ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ. ಸಿಡಿಲು ಬಡಿದು ಬೀದರ್ ಜಿಲ್ಲೆಯಲ್ಲಿ ಕುರಿಗಾಹಿ, ಬಾಗಲಕೋಟೆ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಅಲ್ಲದೆ, ಹಲವು ಎತ್ತು, ಎಮ್ಮೆಗಳು ಸಾವನ್ನಪ್ಪಿವೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ಜಿಂದಾರಾಮ್ ಧೂಳಪ್ಪ ಹೆಡೆ (26) ಅವರು ಹೊಲದಲ್ಲಿ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲಿ ಮೃತಪಟ್ಟರು.

ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದ ರಂಗಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಸತ್ತಿವೆ. ಗ್ರಾಮದ ಶೇಖಪ್ಪ ಕನಕಪ್ಪ ವಾಲೀಕಾರ ಅವರ ಜಮೀನಿನಲ್ಲಿ ಎಮ್ಮೆ, ಮುತ್ತಪ್ಪ ಶರಣಪ್ಪ ಮಜ್ಜಗಿ ಅವರ ಜಮೀನಿನಲ್ಲಿ ಎತ್ತು ಮೃತಪಟ್ಟಿದೆ.

ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಹಿರೊಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಕಟ್ಟಿದ್ದ ಎರಡು ಎತ್ತುಗಳು ಸಿಡಿಲು ಬಡಿದು ಮೃತಪಟ್ಟಿವೆ. ರೈತ ಅನೀಲ ಚಿಕ್ಕಳ್ಳಿ ಅವರಿಗೆ ಈ ಎತ್ತುಗಳು ಸೇರಿವೆ.

ಇಳಕಲ್ (ಬಾಗಲಕೋಟೆ ಜಿಲ್ಲೆ): ಸಮೀಪದ ವಜ್ಜಲ್ ಗ್ರಾಮದ ಹೊಲವೊಂದರಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಶ್ಯಾವಮ್ಮ ಮಲ್ಲಪ್ಪ ವಾಲಿಕಾರ ಅವರು ಮೃತಪಟ್ಟಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1422113854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.