ಕಲಬುರಗಿ: ವಾಹನ ಚಾಲನಾ ಪರವಾನಗಿ ಇಲ್ಲದೇ ಬೈಕ್ ಚಲಾಯಿಸಿ ಎದುರಿಗೆ ಬಂದ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರನ ಸಾವಿಗೆ ಕಾರಣನಾದ ಆರೋಪದಡಿ ಬೈಕ್ ಚಾಲನೆ ಮಾಡುತ್ತಿದ್ದ ಜುಬೈರ್ ಅಲ್ಲಾಮ್ ಹಾಗೂ ಬೈಕ್ ನೀಡಿದ ಮಾಲೀಕ ರಾಜಧರ ಸಲ್ಲಾಮ್ ಅಲ್ಲಾಮ್ ಎಂಬುವವರಿಗೆ 4ನೇ ಹೆಚ್ಚುವರಿ ಸಿಜೆಎಂ ಮತ್ತು ಜೆಎಂಎಫ್ಸಿ ನ್ಯಾಯಾಲಯವು ದಂಡ ವಿಧಿಸಿ ಆದೇಶ ಹೊರಡಿಸಿದೆ.

ಜುಬೈರ್ ಅಲ್ಲಾಮ್ಗೆ ಮೋಟಾರು ವಾಹನ ಕಾಯ್ದೆ ಕಲಂ 181ರ ಅನ್ವಯ ₹5 ಸಾವಿರ ದಂಡ, ಕಲಂ 180ರ ಅನ್ವಯ ₹5 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ದೇಶಮುಖ ಶಿವಕುಮಾರ ಅವರು ಆದೇಶ ಹೊರಡಿಸಿದ್ದಾರೆ. ದಂಡ ಕೊಡಲು ತಪ್ಪಿದಲ್ಲಿ ಎರಡು ದಿನ ಕಾರಾಗೃಹ ವಾಸ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಚಾಲನಾ ಪರವಾನಗಿ ಇಲ್ಲದಿದ್ದರೂ ಬೈಕ್ ನೀಡಿದ ರಾಜಧರ ಸಲ್ಲಾಮ್ ಅಲ್ಲಾಮ್ಗೆ ₹ 1 ಸಾವಿರ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಒಂದು ದಿನ ಸೆರೆವಾಸ ಅನುಭವಿಸಬೇಕು ಎಂದು ತಿಳಿಸಿದ್ದಾರೆ.

2021ರ ಅಕ್ಟೋಬರ್ 3ರಂದು ರಾತ್ರಿ ಹುಮನಾಬಾದ್ ರಸ್ತೆಯ ಕಪನೂರ ಬಳಿ ಅಪರಾಧಿ ಜುಬೈರ್ ಅಲ್ಲಾಮ್ ಎದುರಿಗೆ ಬರುತ್ತಿದ್ದ ಬೈಕ್ ಸವಾರ ಹುಸೇನಿ ಸುಭಾಷ್ ಕೂನಾಳೆ ಎಂಬುವವರಿಗೆ ಡಿಕ್ಕಿ ಹೊಡೆದ. ಡಿಕ್ಕಿಯ ರಭಸಕ್ಕೆ ಹುಸೇನಿ ಸ್ಥಳದಲ್ಲೇ ಮೃತಪಟ್ಟರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರ ಠಾಣೆ–2ರ ರಫೀಕ್ ಮುಲ್ಲಾ, ಸುಮಂಗಲಾ ಹಾಗೂ ಅಮರೇಶ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-34-15406008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.