ಕಲಬುರಗಿ: ತಾಲ್ಲೂಕಿನ ಕುಮಸಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸೋಮವಾರ ಸಿಕ್ಕಿ ಬಿದ್ದಿದ್ದಾರೆ.

ತಂದೆಯ ಹೆಸರಿನಲ್ಲಿದ್ದ ಜಾಗವನ್ನು ತಾಯಿಯ ಹೆಸರಿಗೆ ಮ್ಯುಟೇಷನ್ ಮಾಡಿಕೊಡಲು ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ವ್ಯಕ್ತಿಯೊಬ್ಬರಿಗೆ ₹4 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ ₹2 ಸಾವಿರ ಫೋನ್ ಪೇ ಮೂಲಕ ಪಡೆದಿದ್ದರು. ಈ ಕುರಿತು ಗಣಜಲಖೇಡದ ಗ್ರಾಮದ ಅನೀಲಕುಮಾರ ರಾಠೋಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿ ಸಿದಂತೆ ಲೋಕಾಯುಕ್ತ ಎಸ್ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ರಾಜಶೇಖರ ಬಡದೆಸಾರ ಅವರ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-34-600354479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.