ಕಲಬುರಗಿ: ಪ್ರಚೋದನಕಾರಿ, ದೋಷ ಪೂರಿತ ಹಾಗೂ ಕೋಮು ಸೌಹಾರ್ದ ಕದಡಲು ಯತ್ನಿಸಿದ ಆರೋಪದಡಿ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ಆಳಂದ ಲಾಡ್ಲೆ ಮಶಾಕ್ ದರ್ಗಾ ಆವರಣದ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಮರ ಮೇಲಿನ ಪ್ರಕರಣ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು ಜೂನ್ 1ರಂದು ಪ್ರತಿಭಟನೆ ಆಯೋಜಿಸಿತ್ತು.

‘ಆ ಪ್ರತಿಭಟನಾ ಭಾಷಣದಲ್ಲಿ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಅವರು ಕಲಬುರಗಿಯನ್ನು ಮಿನಿ ಪಾಕಿಸ್ತಾನ್ ಮಾಡಲು ಯತ್ನಿಸಿದ್ದರು. ಅದಕ್ಕೆ ಅವರು ಚುನಾವಣೆಯಲ್ಲಿ ಸೋತರು ಎಂದು ಟೀಕಿಸಿದ್ದಾರೆ. ಈ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡಿದ್ದಾರೆ’ ಎಂದು ಆರೋಪಿಸಿ ನಗರದ ದರ್ಗಾ ಪ್ರದೇಶದ ಖಮರ್ ಕಾಲೊನಿ ನಿವಾಸಿ ಅಜಗರ್ ಹುಸೇನ್ ಪೊಲೀಸರಿಗೆ ದೂರು ನೀಡಿದ್ದರು.

ಈ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಕಲಂಗಳಾದ 353(1)(ಬಿ) ಹಾಗೂ 196 ಅಡಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-34-1611712624

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.