ಗುರುವಾರ , ಜನವರಿ 28, 2021
27 °C

ಡಿ. 2ರಂದು ಬಿಜೆಪಿ ಕಾರ್ಯಕರ್ತರ ಸಮಾವೇಶ: ಶಿವರಾಜ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BJP

ಕಲಬುರ್ಗಿ: ಗ್ರಾಮ ಪಂಚಾಯಿತಿ ಚುನಾವಣೆಗಳು ಸಮೀಪಿಸಿರುವುದರಿಂದ ಡಿಸೆಂಬರ್ 2ರಂದು ಬಿಜೆಪಿಯ ವಿವಿಧ ಮಂಡಲಗಳ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದ್ದು, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಬಿ. ಶ್ರೀರಾಮುಲು ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ 2ರಂದು ಬೆಳಿಗ್ಗೆ 11ಕ್ಕೆ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಮಾವೇಶ ನಡೆಯಲಿದ್ದು, ಜೇವರ್ಗಿ, ಅಫಜಲಪುರ, ಆಳಂದ, ಕಮಲಾಪುರ ಹಾಗೂ ಕಲಬುರ್ಗಿ ದಕ್ಷಿಣ ಮಂಡಲಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4ಕ್ಕೆ ಸೇಡಂನಲ್ಲಿ ನಡೆಯುವ ಸಮಾವೇಶದಲ್ಲಿ ಸೇಡಂ, ಚಿಂಚೋಳಿ, ಚಿತ್ತಾಪುರ ಮಂಡಲಗಳ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಸಂಬಂಧ ಹೈಕಮಾಂಡ್‌ಗೂ ಮನವಿ ಮಾಡಲಾಗಿದೆ. ಇಂದಿನ ಯುವಕರೇ ನಾಳಿನ ನಾಯಕರಾಗಲಿದ್ದು, ದೇಶದ ನಿರ್ಮಾಣ ಮಾಡುವವರು ಯುವಕರೇ ಆಗಿದ್ದರಿಂದ ಅವರನ್ನು ಕಣಕ್ಕಿಳಿಸಲು ಒತ್ತು ನೀಡಲಾಗುತ್ತಿದೆ ಎಂದರು.

ಕಾಂಗ್ರೆಸ್ ಮುಖಂಡರು ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಅವರ ಹೆಸರನ್ನು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕಾರು ಜಪ್ತಿ ಪ್ರಕರಣದಲ್ಲಿ ಪ್ರಸ್ತಾಪಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಮತ್ತಿಮಡು ವಿರುದ್ದ 12 ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದರು. ಈಗಲೂ ಅದನ್ನೇ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕ್ಲಬ್‌, ಬಾರ್‌ಗಳಿಗೂ ಅನುಮತಿ ಕೊಟ್ಡಿದ್ದೇ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ. ಮರಳು ಲೂಟಿಯಾಗಿದ್ದೇ ಡಾ. ಶರಣಪ್ರಕಾಶ ಹಾಗೂ ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿದ್ದ ಅವಧಿಯಲ್ಲಿ. ಆದರೆ ಬಿಜೆಪಿ ಸರ್ಕಾರ ಅಕ್ರಮ ದಂಧೆಗಳನ್ನು ಹತ್ತಿಕ್ಕಲು ಮುಂದಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಚುನಾವಣೆಯ ಬಿಜೆಪಿ ಸಂಚಾಲಕ ಅಮರನಾಥ ಪಾಟೀಲ, ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಮಹಾದೇವ ಬೆಳಮಗಿ, ಸಂತೋಷ ಹಾದಿಮನಿ, ಬಾಬುರಾವ ಹಾಗರಗುಂಡಗಿ, ಅರುಣ ಕುಲಕರ್ಣಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು