ಕಲಬುರಗಿ: ರಾಜ್ಯ ಸರ್ಕಾರವು ಶಾಲೆ–ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ಅವಕಾಶ ನೀಡಿರುವುದನ್ನು ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

‘ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಸಮವಸ್ತ್ರ ನೀತಿಗೆ ವಿರುದ್ಧವಾಗಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಜಾರಿಗೆ ತಂದಿದೆ. ಹಿಂದೂ ಮಕ್ಕಳಿಗೆ ಕೇಸರಿ ಶಾಲ್ ಧರಿಸುವುದನ್ನು ಬ್ಯಾನ್ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮಾಜಿ ಸಂಸದ ಡಾ.ಉಮೇಶ ಜಾಧವ ಮಾತನಾಡಿ, ‘ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಮತ್ತು ಶಾಲಾ ಮಕ್ಕಳಲ್ಲಿ ಏಕತೆಯನ್ನು ತರುವ ಉದ್ದೇಶದಿಂದ ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡನೀಯ’ ಎಂದರು.

‘ಕಾಂಗ್ರೆಸ್ಗೆ ಕೇಸರಿ ಕಂಡರೆ ಭಯವಾಗುತ್ತಿದೆ. ಅದಕ್ಕಾಗಿ ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ನೂತನ ಶಾಲಾ ಸಮವಸ್ತ್ರ ನೀತಿಯನ್ನು ತರಾತುರಿಯಲ್ಲಿ ಕ್ಯಾಬಿನೆಟ್ನಲ್ಲಿ ತೀರ್ಮಾನಿಸಿ ಜನರ ಆಕ್ರೋಶಕ್ಕೆ ತುತ್ತಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶೈಕ್ಷಣಿಕ ಪಾವಿತ್ರ್ಯಕ್ಕಿಂತ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಆದ್ಯತೆ ನೀಡುತ್ತದೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಹಿಜಾಬ್ ಧರಿಸಲು ಅವಕಾಶ ನೀಡಿ, ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಪಕ್ಷದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಮಾತನಾಡಿ, ‘ಶಿಕ್ಷಣ ಸಂಸ್ಥೆಗಳು ಜ್ಞಾನದ ಭಂಡಾರವಿದ್ದಂತೆ. ವಸ್ತ್ರ ಸಂಹಿತೆಯು ಶಿಸ್ತು, ಸಮಭಾವ ಹಾಗೂ ಸಹೋದರತ್ವ ಭಾವವನ್ನು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಕೋಮು ಸಂಕೇತ ಪ್ರತಿನಿಧಿಸುವ ವಸ್ತ್ರ ಧರಿಸಲು ಅವಕಾಶ ನೀಡುವುದು ಹಾಗೂ ಪ್ರೇರಣೆ ನೀಡುವುದು ಶಿಕ್ಷಣ ಕ್ಷೇತ್ರದಲ್ಲಿನ ಪಾವಿತ್ರ್ಯ ಹಾಳು ಮಾಡಿದಂತಾಗುತ್ತದೆ. ಈ ಕೆಟ್ಟ ಸಂಪ್ರದಾಯವನ್ನು ಹೇರುವುದರ ಮುಖಾಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಮು ಭಾವನೆಗಳನ್ನು ಬಿತ್ತಿದೆ’ ಎಂದು ಆರೋಪಿಸಿದರು.

‘ಸಮಾನತೆ ಮತ್ತು ಏಕತೆಯನ್ನು ತರುವ ಉದ್ದೇಶದಿಂದ ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಈಗ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಮಾಜಿ ಸಚಿವ ಬಾಬುರಾವ ಚವ್ಹಾಣ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜು ಬಿರಾದಾರ, ಶಿವಯೋಗಿ ನಾಗನಹಳ್ಳಿ, ಮಹಾದೇವ ಬೆಳಮಗಿ, ಪ್ರಮುಖರಾದ ಇಂದಿರಾ ಶಕ್ತಿ, ಡಾ.ಸುಧಾ ಹಾಲಕೈ, ಶಿವಾ ಅಷ್ಠಗಿ, ಮಂಡಲ ಅಧ್ಯಕ್ಷರಾದ ಶ್ರೀನಿವಾಸ ದೇಸಾಯಿ, ವರದಾಶಂಕರ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಮಹೇಶ್ ಚವ್ಹಾಣ, ವೀರು ರಾಯ್ಕೋಡ್, ಎಸ್ಸಿ ಮೋರ್ಚಾ ಅಧ್ಯಕ್ಷ ಮಹೇಂದ್ರ ಪೂಜಾರಿ, ಗಿರಿರಾಜ್ ಯಳ ಮೇಲಿ, ಸಂತೋಷ ಹಾದಿಮನಿ, ಸವಿತಾ ಪಾಟೀಲ, ಸುಮಂಗಲಾ ಪಾಟೀಲ, ಸಪ್ನಾ ಮಂಗಲಗಿ ಸೇರಿದಂತೆ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-34-1447593732

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.