ಕಲಬುರಗಿ: ನಗರದ ಜೆಸ್ಕಾಂ ಕಾರ್ಪೊರೇಟ್ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಬುದ್ಧ, ಬಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ‘ಬುದ್ಧ, ಬಸವ ಹಾಗೂ ಡಾ.ಅಂಬೇಡ್ಕರ್ ಅವರು ಸಮಾಜಕ್ಕೆ ಸಮಾನತೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ನೀಡಿದ ಮಹನೀಯರು. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಆಣದೂರು ಬುದ್ಧ ವಿಹಾರದ ಭಂತೆ ವರಜ್ಯೋತಿ ಥೇರಾ, ಮುಗಳನಾಗಾವಿಯ ಕಟ್ಟಿಮನಿ ಹಿರೇಮಠ ಸಂಸ್ಥಾನದ ಅಭಿನವ ಸಿದ್ದಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಚಂದ್ರಕಾಂತ ಪಾಟೀಲ, ಶಿವಶಂಕರ ಬಿ., ಮಹಾಲಕ್ಷ್ಮಿ ಟಿ., ಕಿರಣಕುಮಾರ ಪೊಲೀಸ್ ಪಾಟೀಲ, ಸಾಯಬಣ್ಣ ಕಾಳೆ, ಶಿವಾನಂದ ತೋಳೆ, ಶಿವಕುಮಾರ ಮದನಕರ, ಪುಟ್ಟಮಣಿ ದೇವಿದಾಸ, ರಮೇಶ ಮಾಡ್ಯಾಳಕರ್, ಬಾಬು ಕೋರೆ, ಸಚಿನ್ ಹುಂಡೇಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-34-1686600812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.