ಕಲಬುರಗಿ: ನಗರದ ಹೊರವಲಯದ ಸಿರನೂರು ಬಳಿ ಗುರುವಾರ ಎರಡು ಕೆಕೆಆರ್ಟಿಸಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ವಿಜಯಪುರ ಡಿಪೊಗೆ ಸೇರಿದ ಬಸ್ ಕಲಬುರಗಿಯಿಂದ ವಿಜಯಪುರದತ್ತ ಹೊರಟಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ಡಿಪೊ ಬಸ್ ಜೇವರ್ಗಿ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿತ್ತು. ಈ ವೇಳೆ ವಿಜಯಪುರದತ್ತ ಹೊರಟಿದ್ದ ಬಸ್ ಚಾಲಕ ಮುಂದೆ ಹೋಗುತ್ತಿದ್ದ ಕಾರನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ಎದುರಿನಿಂದ ಬರುತ್ತಿದ್ದ ಬಸ್ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ದೇವದುರ್ಗ ಡಿಪೊಗೆ ಸೇರಿದ ಬಸ್ನ ಮುಂಭಾಗದ ಗಾಜು ಸಂಪೂರ್ಣ ಪುಡಿಯಾಗಿದ್ದು, ವಿಜಯಪುರ ಡಿಪೊಗೆ ಸೇರಿದ ಬಸ್ ಗಾಜು ಭಾಗಶಃ ಒಡೆದಿದೆ.

ಅಪಘಾತದಿಂದಾಗಿ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.

ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಪಘಾತದ ಕುರಿತು ಕಲಬುರಗಿ ಸಂಚಾರ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-34-1492446376

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.