ಕಲಬುರಗಿ: ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಮಿಕರ ಸಂಘ, ಕೆಕೆಆರ್ಟಿಸಿ ಅಧಿಕಾರಿಗಳ ಮತ್ತು ಕಾರ್ಮಿಕರ ಗುತ್ತಿಗೆದಾರ ನಡುವೆ ಮಧ್ಯೆ ಶುಕ್ರವಾರ ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರಿಪಕ್ಷೀಯ ಸಭೆ ಫಲಪ್ರದವಾಗಿದೆ.

ಹೀಗಾಗಿ, ಇದೇ 28ರಂದು ಅರುಣಕುಮಾರ್ ಅವರ ಮನೆ ಎದುರು ನಡೆಸಲು ಉದ್ದೇಶಿಸಿದ್ದ ಧರಣಿ ಸತ್ಯಾಗ್ರಹವನ್ನು ವಾಪಸ್ ಪಡೆಯಲಾಗಿದೆ ಎಂದು ಬಸ್ ನಿಲ್ದಾಣ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಎಂ.ಬಿ. ಸಜ್ಜನ್, ಅಧ್ಯಕ್ಷೆ ಉಷಾ ಡಿಗ್ಗಿ ತಿಳಿಸಿದ್ದಾರೆ.

ಸಭೆಯಲ್ಲಿ ಎಲ್ಲಾ 21 ಕಾರ್ಮಿಕರನ್ನು ಪುನಃ ಕೆಲಸಕ್ಕೆ ವಾಪಸ್ ತೆಗೆದುಕೊಳ್ಳುವ ನಮ್ಮ ಬೇಡಿಕೆಗೆ ಗುತ್ತಿಗೆದಾರ ಒಪ್ಪಿಗೆ ನೀಡಿದರು. ಶನಿವಾರದಿಂದಲೇ ಎಲ್ಲಾ ಕಾರ್ಮಿಕರು ಕೆಲಸಕ್ಕೆ ಹಾಜರಾಗುವವರಿದ್ದಾರೆ. ಕಾರ್ಮಿಕರ ಇತರ ಬೇಡಿಕೆಗಳಾದ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-34-236842876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.