ಕಲಬುರಗಿ: ಲೇಖಕಿ ಬಾನು ಮುಷ್ತಾಕ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡಿದ್ದಕ್ಕಾಗಿ ಕೆಲವರು ಜಾತಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭೀಮ್ ಆರ್ಮಿ ಯುವ ಘಟಕದ ರಾಜ್ಯಾಧ್ಯಕ್ಷ ಸಂತೋಷ ಮಾಲೆ ಪಾಳಾ ಪೊಲೀಸರಿಗೆ ದೂರು ನೀಡಿದ್ದಾರೆ.

‘ಮಂಡ್ಯದಲ್ಲಿ ನಡೆದ ಸಮಾರಂಭದಲ್ಲಿ ಬಾನು ಮುಷ್ತಾಕ್ ಅವರು ಪಾದರಕ್ಷೆ ಧರಿಸಿ ಡಾ.ಬಿ.ಆರ್.ಅಂಬೇಡ್ಕರ್ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದರು. ಈ ಅಪಮಾನದ ಕುರಿತು ನಾನು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ್ದೆ. ಅದಕ್ಕೆ ಕೆಲವರು ಕರೆ ಮಾಡಿ ಜಾತಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ. ಇನ್ನೂ ಕೆಲವರು ವಿಡಿಯೊ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೇ, ‘ಅಶ್ರಫ್ ಅಲಿ, ಬಾಬಾ ಎಂಎಸ್ಕೆಮಿಲ್, ಸಮೀರ್ ಅವಟಿ ಹಾಗೂ ಇತರ ಐವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-34-958829298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.