ಕಲಬುರಗಿ: ‘ದೇಶದ ಸಂವಿಧಾನ ಜಾರಿಗೆ ಬಂದು 75 ವರ್ಷ ಕಳೆದರೂ ಜಾತೀಯತೆಯನ್ನು ಜೀವಂತವಾಗಿಡುವ ಯತ್ನಗಳು ನಡೆಯುತ್ತಿವೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕಂಡಿದ್ದ ಸಮಾನತೆಯ ಕನಸು ನನಸಾಗಿಲ್ಲ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ ಲಂಡನಕರ್ ಬೇಸರ ವ್ಯಕ್ತಪಡಿಸಿದರು.

ನಗರದ ಹೀರಾಪುರ ವೃತ್ತದಲ್ಲಿ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಅರಿವು ಉತ್ಸವದಲ್ಲಿ ಮಾತನಾಡಿದ ಅವರು, ‘ಇತ್ತೀಚಿನ ವರ್ಷಗಳಲ್ಲಿ ಅಸ್ಪೃಶ್ಯತೆ ಕೊಂಚ ಮಟ್ಟಿಗೆ ತೊಲಗಿದೆಯಾದರೂ ಜಾತೀಯತೆ ಜೀವಂತವಾಗಿಯೇ ಇದೆ. ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಅದಕ್ಕಾಗಿಯೇ ಕ್ರಿಯೆಗೆ ಪ್ರತಿಕ್ರಿಯೆ ತೋರಿಸುವ ಸಮಯ ಬಂದಿದ್ದು, ಅಂಬೇಡ್ಕರ್ ಅವರು ಹಾಕಿಕೊಟ್ಟಿರುವ ಹೋರಾಟದ ಹಾದಿಯನ್ನು ತುಳಿಯಬೇಕಿದೆ’ ಎಂದರು.

‘1990ರ ದಶಕದಲ್ಲಿ ಜಾರಿಗೆ ಬಂದ ಜಾಗತೀಕರಣ, ಉದಾರೀಕರಣ, ಖಾಸಗೀಕರಣ ನೀತಿಗಳು ಬಡವರು, ಹಿಂದುಳಿದವರು, ದಲಿತರ ಬದುಕನ್ನು ಇನ್ನಷ್ಟು ಅಸಹನೀಯಗೊಳಿಸಿದೆ. ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಿಕೊಳ್ಳುತ್ತಿಲ್ಲ. ದಲಿತರಿಗೆ ಹಂಚಬೇಕಿರುವ ಭೂಮಿಯನ್ನು ಖಾಸಗೀಕರಣಗೊಳಿಸಲಾಗುತ್ತಿದೆ’ ಎಂದು ವಿಷಾದಿಸಿದರು.

ಬಿಎಸ್ಐ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಪುಟ್ಟಮಣಿ ದೇವಿದಾಸ ಮಾತನಾಡಿ, ‘ಮೈಮೇಲೆ ಬಟ್ಟೆ ಇಲ್ಲದಿದ್ದರೂ ಚಿಂತೆ ಇಲ್ಲ, ಕೈಯಲ್ಲೊಂದು ಪುಸ್ತಕ ಹಿಡಿಯಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಿದ್ದರು. ಎಲ್ಲರೂ ಶಿಕ್ಷಣ ಪಡೆದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂಬುದು ಅವರ ಧ್ಯೇಯವಾಗಿತ್ತು. ಮಹಿಳೆಯರ ಬಗ್ಗೆ ಅಂಬೇಡ್ಕರ್ ಅವರು ಬಹಳ ವಿಶ್ವಾಸವಿರಿಸಿದ್ದರು. 192 ದೇಶಗಳಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ಆದರೆ, ಅವರು ಭಾರತದಲ್ಲಿಯೇ ಅವರ ಮಹತ್ವದ ಬಗ್ಗೆ ಇನ್ನೂ ಅರ್ಥವಾಗಿಲ್ಲ’ ಎಂದರು.

ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಹಣಮಂತ ಇಟಗಿ ವೇದಿಕೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-1438520370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.