ಕಲಬುರಗಿ: ನಗರ ಹೊರವಲಯದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಜೈಲು ಅಧೀಕ್ಷಕ ರಾಕೇಶ್ ಕಾಂಬಳೆ ಡಾ.ಅಂಬೇಡ್ಕರ್ ಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ‘ಬಾಬಾಸಾಹೇಬ ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ. ಸಮಾನತೆಯ ಹರಿಕಾರ, ಮಹಿಳಾ ವಿಮೋಚಕ, ಶೋಷಿತರ ಧ್ವನಿ, ಮಹಾನ್ ವಿದ್ವಾಂಸ, ಅರ್ಥಶಾಸ್ತ್ರಜ್ಞ, ಕಾನೂನು ಪಂಡಿತರೂ ಆಗಿದ್ದರು. ಸಮ ಸಮಾಜದ ನಿರ್ಮಾಣ ಹಾಗೂ ಪ್ರತಿಯೊಬ್ಬರಿಗೆ ಶಿಕ್ಷಣ ದೊರಕಬೇಕು ಎಂಬುದು ಅವರ ಕನಸಾಗಿತ್ತು. ನಾವೆಲ್ಲರೂ ಶಿಕ್ಷಣ ಪಡೆದು ಸಮ ಸಮಾಜ ನಿರ್ಮಿಸುವ ಮೂಲಕ ಅಂಬೇಡ್ಕರ್ ಅವರ ಕನಸು ಸಾಕಾರಗೊಳಿಸಬೇಕು’ಎಂದರು.

ಸಹಾಯಕ ಅಧೀಕ್ಷಕ ಬಿ.ಸುರೇಶ ಮಾತನಾಡಿದರು. ಜೈಲಿನ ಬಂದಿಗಳು ಡಾ.ಅಂಬೇಡ್ಕರ್ ಕುರಿತು ಗೀತೆ ಹಾಗೂ ಭಜನೆಗಳನ್ನು ಹಾಡಿದರು. ನಂತರ ಎಲ್ಲಾ ಬಂದಿಗಳಿಗೆ ಮತ್ತು ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗೆ ಸಿಹಿ ವಿತರಿಸಲಾಯಿತು.

ಸಂಸ್ಥೆಯ ಸಹಾಯಕ ಅಧೀಕ್ಷಕ ಚನ್ನಪ್ಪ ಯಟಗಲ್, ಜೈಲರ್ಗಳಾದ ಸಾಗರ ಪಾಟೀಲ, ಶ್ರೀಮಂತಗೌಡ ಪಾಟೀಲ, ಪುಂಡಲಿಕ ಟಿ.ಕೆ. ಸೇರಿದಂತೆ ಅಧಿಕಾರಿ/ಸಿಬ್ಬಂದಿ ಪಾಲ್ಗೊಂಡಿದ್ದರು. ಭೀಮಾಶಂಕರ್ ಡಾಂಗೆ ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕ ನಾಗರಾಜ ಮೂಲಗೆ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-1641765083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.